ಭದ್ರಾವತಿ ಕಾಗದನಗರ ಆಂಗ್ಲ ಶಾಲೆಯಲ್ಲಿ ಶನಿವಾರ ೪೦ನೇ ವರ್ಷದ ಸವಿನೆನಪಿನಲ್ಲಿ ೧೯೮೮ ರಿಂದ ೨೦೨೦ರ ವರೆಗೆ ಶಾಲೆಯಲ್ಲಿ ವ್ಯಾಸಂಗ ಮಾಡಿರುವ ಸುಮಾರು ೬೦೦ ರಿಂದ ೭೦೦ ಮಂದಿ ಹಳೇಯ ವಿದ್ಯಾರ್ಥಿಗಳು ಸಂಘಟಿತರಾಗಿ ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮವನ್ನು ಶಾಲೆಯ ಹಿರಿಯ ನಿವೃತ್ತ ಪ್ರಾಂಶುಪಾಲ ವೈ. ಶೇಷಾಚಲ ಉದ್ಘಾಟಿಸಿದರು.
ಭದ್ರಾವತಿ, ಅ. ೧೬: ಶಾಲಾ ಅಭಿವೃದ್ಧಿಯಲ್ಲಿ ಕಾಗದನಗರ ಆಂಗ್ಲ ಶಾಲೆಯ ಹಳೇಯ ವಿದ್ಯಾರ್ಥಿಗಳ ಪಾತ್ರ ಗಮನಾರ್ಹವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ಪ್ರಶಂಸೆ ವ್ಯಕ್ತಪಡಿಸಿದರು.
ಅವರು ಶನಿವಾರ ಶಾಲೆಯಲ್ಲಿ ೪೦ನೇ ವರ್ಷದ ಸವಿನೆನಪಿನಲ್ಲಿ ೧೯೮೮ ರಿಂದ ೨೦೨೦ರ ವರೆಗೆ ಶಾಲೆಯಲ್ಲಿ ವ್ಯಾಸಂಗ ಮಾಡಿರುವ ಸುಮಾರು ೬೦೦ ರಿಂದ ೭೦೦ ಮಂದಿ ಹಳೇಯ ವಿದ್ಯಾರ್ಥಿಗಳು ಸಂಘಟಿತರಾಗಿ ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಹಳೇಯ ವಿದ್ಯಾರ್ಥಿಗಳು ಸಂಘಟಿತರಾಗಿ ಶಾಲೆಯನ್ನು ಅಭಿವೃದ್ಧಿಪಡಿಸುವ ಮೂಲಕ ಮುಂದಿನ ಪೀಳಿಗೆಯವರಿಗೆ ಮಾದರಿಯಾಗಿರುವುದು ಹೆಮ್ಮೆಯ ವಿಚಾರವಾಗಿದೆ. ಅಲ್ಲದೆ ತಮಗೆ ಪಾಠ ಹೇಳಿಕೊಟ್ಟ ಶಿಕ್ಷಕರ ಬಗ್ಗೆ ಹೊಂದಿರುವ ಕಾಳಜಿ ಅಭಿನಂದನಾರ್ಹ ಎಂದರು.
ಎಂಪಿಎಂ ಶಿಕ್ಷಣ ಸಂಸ್ಥೆಗಳ ಖಜಾಂಚಿ ಎಂ.ಡಿ ರವಿಕುಮಾರ್ ಮಾತನಾಡಿ, ಹಳೇಯ ವಿದ್ಯಾರ್ಥಿಗಳು ಶಾಲೆಯ ಅಭಿವೃದ್ಧಿಯಲ್ಲಿ ತೋರಿರುವ ಕಾಳಜಿಯಿಂದಾಗಿ ಅವರ ಮೇಲೆ ಗೌರವದ ಭಾವನೆಗಳು ಮೂಡುತ್ತಿವೆ. ಶಿಕ್ಷಕರನ್ನು ಗೌರವಿಸುವ ಅವರ ಕಾರ್ಯಕ್ಕೆ ಬೆಲೆಕಟ್ಟಲು ಸಾಧ್ಯವಿಲ್ಲ. ಈ ಕಾರ್ಯಕ್ರಮ ನನ್ನ ಬಾಲ್ಯದ ಶಿಕ್ಷಣದ ನೆನಪುಗಳನ್ನು ಮರುಕಳುಹಿಸುವಂತೆ ಮಾಡಿದೆ ಎಂದರು.
ಶಾಲೆಯ ಹಿರಿಯ ನಿವೃತ್ತ ಪ್ರಾಂಶುಪಾಲ ವೈ. ಶೇಷಾಚಲ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಾಂಶುಪಾಲ ಆರ್. ಸತೀಶ್ ಅಧ್ಯಕ್ಷತೆ ವಹಿಸಿದ್ದರು. ಕಾಗದನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಇ.ಓ ಮಂಜುನಾಥ್, ಕ್ಷೇತ್ರ ಶಿಕ್ಷಣ ಇಲಾಖೆ ಸಂಪನ್ಮೂಲ ವ್ಯಕ್ತಿ ಸಿ. ಚನ್ನಪ್ಪ, ಪಿಟಿಜೆಸಿ ಪ್ರಾಂಶುಪಾಲ ಲಕ್ಷ್ಮೀಕಾಂತ್, ಉಪಪ್ರಾಂಶುಪಾಲ ಡಿ. ನಾಗರಾಜ್, ಹಳೇಯ ವಿದ್ಯಾರ್ಥಿಗಳಾದ ಕಾರ್ಯಕ್ರಮದಲ್ಲಿ ಪ್ರಮುಖ ಪಾತ್ರ ವಹಿಸಿರುವ ವಿನೂತನ್, ಪ್ರೀತಮ್, ಅರುಣ್, ಎಚ್.ಆರ್ ಮಮತಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಹೊರ ರಾಜ್ಯ ಹಾಗು ರಾಜ್ಯದ ವಿವಿಧ ಮೂಲೆಗಳಿಂದ ಶಾಲೆಯಲ್ಲಿ ಈ ಹಿಂದೆ ಕರ್ತವ್ಯ ನಿರ್ವಹಿಸಿರುವ ಶಿಕ್ಷಕರು, ವ್ಯಾಸಂಗ ಮಾಡಿರುವ ಹಳೇಯ ವಿದ್ಯಾರ್ಥಿಗಳು, ಶಾಲೆಯ ಶಿಕ್ಷಕ ಹಾಗು ಸಿಬ್ಬಂದಿ ವರ್ಗದವರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ವೇದಿಕೆ ಕಾರ್ಯಕ್ರಮದ ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
No comments:
Post a Comment