ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭದ್ರಾವತಿಯಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಗುರುವಾರ ಕಪ್ಪುಪಟ್ಟಿ ಧರಿಸಿ ಹೋರಾಟ ನಡೆಸುವ ಮೂಲಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಗುರುವಾರ ಕಪ್ಪುಪಟ್ಟಿ ಧರಿಸಿ ಹೋರಾಟ ನಡೆಸುವ ಮೂಲಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಪದವೀಧರ ಶಿಕ್ಷಕರ ಸಮಸ್ಯೆ, ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ, ಅವರ ಸೇವಾವಧಿಯಲ್ಲಿ ಶಿಕ್ಷಕರು ಬಯಸುವ ಜಿಲ್ಲೆಗೆ ೧ ಬಾರಿ ವರ್ಗಾವಣೆ ಮಾಡುವುದು. ಮುಖ್ಯ ಶಿಕ್ಷಕರಿಗೆ ೧೫, ೨೦ ಮತ್ತು ೨೫ ವರ್ಷಗಳ ವೇತನ ಬಡ್ತಿ ನೀಡುವುದು, ನೂತನ ಪಿಂಚಣಿ ಯೋಜನೆ ರದ್ದುಗೊಳಿಸುವುದು ಹಾಗು ಗ್ರಾಮೀಣ ಕೃಪಾಂಕ ಶಿಕ್ಷಕರ ಸಮಸ್ಯೆ ಮತ್ತು ದೈಹಿಕ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸುವುದು ಸೇರಿದಂತೆ ಇತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಲಾಯಿತು.
ಶೈಕ್ಷಣಿಕ ಕಾರ್ಯ ಚಟುವಟಿಕೆಗಳ ನಡುವೆಯೂ ಹೋರಾಟ ನಡೆಸುತ್ತಿದ್ದು, ಒಂದು ವೇಳೆ ಸರ್ಕಾರ ಬೇಡಿಕೆಗಳಿಗೆ ಸ್ಪಂದಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಟಿ. ಎನ್ ಸೋಮಶೇಖರಯ್ಯ ಮೂಲಕ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷ ಎಂ. ಎಸ್ ಬಸವರಾಜ್, ಪ್ರಧಾನ ಕಾರ್ಯದರ್ಶಿ ಎಸ್. ಕೆ ಮೋಹನ್, ಜಿಲ್ಲಾ ಪ್ರಧಾನಕಾರ್ಯದರ್ಶಿ ಶ್ರೀಧರಗೌಡ ವೈ ಎನ್, ಜಿಲ್ಲಾ ಉಪಾಧ್ಯಕ್ಷರಾದ ಚಿತ್ರ, ಜೈಕುಮಾರ್ ಎಂ. ಬಿ, ತಾಲ್ಲೂಕು ಉಪಾಧ್ಯಕ್ಷರಾದ ಸುಮತಿ, ರಾಜು, ದೈಹಿಕ ಶಿಕ್ಷಣಾಧಿಕಾರಿ ಪ್ರಭು, ಪದಾಧಿಕಾರಿಗಳಾದ ನಿರ್ಮಲ, ಮಾಯಮ್ಮ, ಶಾರದಮ್ಮ, ಆನಂದ್ ಎಂ. ಸಿ, ಪೃಥ್ವಿರಾಜ್, ಮಲ್ಲಿಕಾರ್ಜುನ್, ಕೋಕಿಲ, ಧಾರತಿ, ನಂಜನಾಯ್ಕ, ಶಿವಕುಮಾರ್, ಪಾಲಾಕ್ಷಪ್ಪ ಇನ್ನಿತರರು ಪಾಲ್ಗೊಂಡಿದ್ದರು.
*🙏🙏💐💐ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಸಮಸ್ಯೆಗಳ ಬಗ್ಗೆ ವರದಿ ಮಾಡಿರುವ ತಮಗೆ ಸಮಸ್ತ ಗುರುಗಳ ಪರವಾಗಿ ಸಂಘದಿಂದ ಅನಂತ ಅನಂತ ಧನ್ಯವಾದಗಳು ಸರ್. ಮಾಧ್ಯಮದವರು ಮನಸ್ಸು ಮಾಡಿದರೆ ಶಿಕ್ಷಕರ ಸಮಸ್ಯೆಗಳು ಸರ್ಕಾರದಲ್ಲಿ ಅತ್ಯಂತ ಉನ್ನತ ಮಟ್ಟದಲ್ಲಿ ಚರ್ಚೆಯಾಗುವ ಮೂಲಕ ಪರಿಹಾರವಾಗಿ ಶಿಕ್ಷಕರಿಗೆ ಮಾನಸಿಕವಾಗಿ ನೆಮ್ಮದಿ ದೊರೆತು, ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವಲ್ಲಿ ಅತ್ಯಂತ ಸಹಕಾರಿಯಾಗುತ್ತದೆ. ಮತ್ತೊಮ್ಮೆ ಧನ್ಯವಾದಗಳು. 🙏🙏🙏🙏💐💐💐💐💐ಇಂದ... ಮೋಹನ್ ಎಸ್ ಕೆ ಪ್ರಧಾನಕಾರ್ಯದರ್ಶಿ ಶಿಕ್ಷಕರ ಸಂಘ ಹಾಗೂ ಖಜಾಂಚಿ ಸರ್ಕಾರಿ ನೌಕರರ ಸಂಘ ಭದ್ರಾವತಿ 💐💐💐🙏🙏🙏*
ReplyDelete