ಭದ್ರಾವತಿ, ಅ. ೩೦: ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಜಿಲ್ಲಾ ಸಮ್ಮೇಳನ ಅ.೩೧ರ ಭಾನುವಾರ ಬೆಳಿಗ್ಗೆ ೧೧ ಗಂಟೆಗೆ ನ್ಯೂಟೌನ್ ಲಯನ್ಸ್ ಕ್ಲಬ್ ಉಂಬ್ಳೆಬೈಲ್ ರಸ್ತೆಯಲ್ಲಿ ನಡೆಯಲಿದೆ.
ರಾಜ್ಯ ಸಮಿತಿ ಸದಸ್ಯ ಡಾ. ಕೆ. ಪ್ರಕಾಶ್ ಸಮ್ಮೇಳನ ಉದ್ಘಾಟಿಸಲಿದ್ದು, ಜಿಲ್ಲಾ ಸಮಿತಿ ಸದಸ್ಯ, ನ್ಯಾಯವಾದಿ ಜಿ.ಎಸ್ ನಾಗರಾಜ ಅಧ್ಯಕ್ಷತೆ ವಹಿಸಲಿದ್ದಾರೆ.
ರಾಜ್ಯ ಸಮಿತಿ ಸದಸ್ಯ ಬಾಲಕೃಷ್ಣ ಶೆಟ್ಟಿ, ಜಿಲ್ಲಾ ಸಮಿತಿ ಸದಸ್ಯರಾದ ಕೆ. ಪ್ರಭಾಕರನ್, ಕೆ. ಮಂಜಣ್ಣ ಮತ್ತು ಎಂ. ಅನಂತರಾಮು ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. ಸಮ್ಮೇಳನ ಯಶಸ್ವಿಗೊಳಿಸುವಂತೆ ಜಿಲ್ಲಾ ಸಮಿತಿ ಕಾರ್ಯರ್ಶಿ ಎಂ. ನಾರಾಯಣ ಕೋರಿದ್ದಾರೆ.
No comments:
Post a Comment