ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಕಾರ್ಯನಿರ್ವಾಹಕ ಸಮಿತಿ ಸಭೆ ಭದ್ರಾವತಿ ನಗರದ ರಂಗಪ್ಪ ವೃತ್ತ ಸಮೀಪದ ಜೈಭೀಮಾ ನಗರದಲ್ಲಿರುವ ಸಮಿತಿಯ ಕೇಂದ್ರ ಕಛೇರಿಯಲ್ಲಿ ಸೋಮವಾರ ನಡೆಯಿತು.
ಭದ್ರಾವತಿ, ಅ. ೧೮: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಕಾರ್ಯನಿರ್ವಾಹಕ ಸಮಿತಿ ಸಭೆ ನಗರದ ರಂಗಪ್ಪ ವೃತ್ತ ಸಮೀಪದ ಜೈಭೀಮಾ ನಗರದಲ್ಲಿರುವ ಸಮಿತಿಯ ಕೇಂದ್ರ ಕಛೇರಿಯಲ್ಲಿ ಸೋಮವಾರ ನಡೆಯಿತು.
ರಾಜ್ಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಸಂಘಟನೆಯ ಕಾರ್ಯ ಚಟುವಟಿಕೆಗಳ ಕುರಿತು ಸುಧೀರ್ಘವಾಗಿ ಚರ್ಚಿಸಲಾಯಿತು.
ರಾಜ್ಯ ಸಂಘಟನಾ ಸಂಚಾಲಕರಾದ ಹಾಸನದ ಎಸ್.ಎನ್ ಮಲ್ಲಪ್ಲ, ಧಾರವಾಡದ ಮರೀಶ್ ನಾಗಣ್ಣವರ್, ಚಿಕ್ಕಬಳ್ಳಾಪುರದ ವಿಜಯನರಸಿಂಹ, ಕೋಲಾರದ ಸೂಲಿಕುಂಟೆ ರಮೇಶ್, ಗದಗದ ಎಸ್.ಎನ್ ಬಳ್ಳಾರಿ ಹಾಗೂ ದಲಿತ ನೌಕರರ ಒಕ್ಕೂಟದ ರಾಜ್ಯಾಧ್ಯಕ್ಷ ಮಂಗಳೂರಿನ ಶ್ರೀನಿವಾಸಲು, ಕಾರ್ಯಾಧ್ಯಕ್ಷ ಸಿ. ಜಯಪ್ಪ, ಡಿಎಸ್‌ಎಸ್ ರಾಜ್ಯ ಸಮಿತಿ ಸದಸ್ಯ ಚಿಕ್ಕಮಗಳೂರಿನ ಕೆ.ಸಿ ವಸಂತಕುಮಾರ್, ವಿಭಾಗೀಯ ಸಂಚಾಲಕ ಸೊರಬದ ಗುರುರಾಜ್, ಶಿವಮೊಗ್ಗ ಜಿಲ್ಲಾ ಸಂಚಾಲಕ ಚಿನ್ನಯ್ಯ, ಮಂಡ್ಯದ ನಂಜುಂಡಮೌರ್ಯ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಂಘಟನಾ ಸಂಚಾಲಕ ಮುನಿರಾಜ್, ಪ್ರಮುಖರಾದ ಸತ್ಯ ಭದ್ರಾವತಿ, ತಾಲೂಕು ಸಂಚಾಲಕ ರಂಗನಾಥ್, ಜಿಲ್ಲಾ ಅಂಗವಿಕಲರ ವಿಭಾಗದ ಜಿಲ್ಲಾಧ್ಯಕ್ಷ ಕಾಣಿಕ್‌ರಾಜ್, ಈಶ್ವರಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment