ಭದ್ರಾವತಿ, ಅ. ೩೧: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನ.೧ರಂದು ಹಳೇನಗರದ ಕನಕಮಂಟಪ ಮೈದಾನದಲ್ಲಿ ೬೬ನೇ ಕನ್ನಡ ರಾಜ್ಯೋತ್ಸವ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ ೮ ಗಂಟೆಗೆ ಬಿ.ಎಚ್ ರಸ್ತೆ ಅಂಡರ್ ಬ್ರಿಡ್ಜ್ ಅಂಬೇಡ್ಕರ್ ವೃತ್ತದಿಂದ ಕನಕ ಮಂಟಪ ಮೈದಾನದವರೆಗೂ ತಾಯಿ ಶ್ರೀ ಭುವನೇಶ್ವರಿ ದೇವಿ ಮೆರವಣಿಗೆ ಹಾಗು ೯ ಗಂಟೆಗೆ ಧ್ವಜಾರೋಹಣ ನಡೆಯಲಿದೆ.
ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಬಿ ಅಶೋಕ್‌ನಾಯ್ಕ್ ಮೆರವಣಿಗೆಗೆ ಚಾಲನೆ ನೀಡಲಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್ ವೇದಿಕೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಸಚಿವ ಕೆ.ಎಸ್ ಈಶ್ವರಪ್ಪ, ಸಂಸದ ಬಿ.ವೈ ರಾಘವೇಂದ್ರ, ಶಾಸಕರಾದ ಸಿ.ಎಂ. ಇಬ್ರಾಹಿಂ, ಆರ್. ಪ್ರಸನ್ನಕುಮಾರ್, ಆಯನೂರು ಮಂಜುನಾಥ್, ಎಸ್.ಎಲ್ ಭೋಜೇಗೌಡ, ಎಸ್. ರುದ್ರೇಗೌಡ, ಭಾರತಿಶೆಟ್ಟಿ, ಎಪಿಎಂಸಿ ಅಧ್ಯಕ್ಷ ಲವೇಶ್‌ಗೌಡ, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಅಪೇಕ್ಷ ಮಂಜುನಾಥ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿದ್ದಬಸಪ್ಪ, ತಹಸೀಲ್ದಾರ್ ಆರ್. ಪ್ರದೀಪ್, ಪೊಲೀಸ್ ಉಪಾಧೀಕ್ಷಕ ಸಾಹಿಲ್ ಬಾಗ್ಲ, ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎಂ ಗಾಮನಘಟ್ಟಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ನಗರಸಭೆ ಪೌರಾಯುಕ್ತ ಕೆ. ಪರಮೇಶ್ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment