ಪ್ರತಿ ವರ್ಷದಂತೆ ಈ ಬಾರಿ ಸಹ ಭದ್ರಾವತಿ ನಗರಸಭೆ ವತಿಯಿಂದ ೯ ದಿನಗಳ ಕಾಲ ನಾಡಹಬ್ಬ ದಸರಾ ಆಚರಿಸಲಾಗುತ್ತಿದ್ದು, ಸಾಹಿತಿಗಳು, ವೈದ್ಯರು ಆದ ಡಾ. ಕೃಷ್ಣ ಎಸ್ ಭಟ್ ಗುರುವಾರ ಹಳೇನಗರದ ಶ್ರೀ ಹಳದಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ದಸರಾ ಉದ್ಘಾಟಿಸಿದರು.
ಭದ್ರಾವತಿ, ಅ. ೭: ಪ್ರತಿ ವರ್ಷದಂತೆ ಈ ಬಾರಿ ಸಹ ನಗರಸಭೆ ವತಿಯಿಂದ ೯ ದಿನಗಳ ಕಾಲ ನಾಡಹಬ್ಬ ದಸರಾ ಆಚರಿಸಲಾಗುತ್ತಿದ್ದು, ಸಾಹಿತಿಗಳು, ವೈದ್ಯರು ಆದ ಡಾ. ಕೃಷ್ಣ ಎಸ್ ಭಟ್ ಗುರುವಾರ ಹಳೇನಗರದ ಶ್ರೀ ಹಳದಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ದಸರಾ ಉದ್ಘಾಟಿಸಿದರು.
ಮಧ್ಯಾಹ್ನ ಸುಮಾರು ೧೨ ಗಂಟೆಗೆ ತಾಯಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಎಲ್ಲರಿಗೂ ಶುಭ ಕೋರಿದರು. ಇದಕ್ಕೂ ಮೊದಲು ನಗರಸಭೆ ಆಡಳಿತ ಪರವಾಗಿ ಪೌರಾಯುಕ್ತ ಕೆ. ಪರಮೇಶ್, ಕಂದಾಯಾಧಿಕಾರಿ ಎಂ.ಎಸ್ ರಾಜ್‌ಕುಮಾರ್, ಸಹಾಯಕ ಕಾರ್ಯಪಾಲ ಅಭಿಯಂತರ ಶ್ರೀರಂಗರಾಜಪುರೆ, ಪರಿಸರ ಅಭಿಯಂತರ ಪ್ರಭಾಕರ್, ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ತಾಲೂಕು ಅಧ್ಯಕ್ಷ ಮಂಜುನಾಥ್ ಹಾಗು ಸಿಬ್ಬಂದಿ ವರ್ಗದವರು, ನಗರಸಭೆ ಸದಸ್ಯರು ಸೇರಿದಂತೆ ಇನ್ನಿತರರು ಕೃಷ್ಣ ಎಸ್ ಭಟ್ ಅವರನ್ನು ಸ್ವಾಗತಿಸಿದರು.
ದೇವಸ್ಥಾನದಲ್ಲಿ ನಗರಸಭೆ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ಶ್ರೀ ಚಾಮುಂಡೇಶ್ವರಿ ದೇವಿ ಹಾಗು ಶ್ರೀ ಹಳದಮ್ಮ ದೇವಿ ಸೇರಿದಂತೆ ಎಲ್ಲಾ ಪ್ರತಿಷ್ಠಾಪನಾ ಮೂರ್ತಿಗಳಿಗೂ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು. ದೇವಸ್ಥಾನ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಪೌರಕಾರ್ಮಿಕರು ಹಾಗು ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು.
ಭದ್ರಾವತಿ ನಗರಸಭೆ ಆಡಳಿತ ಪರವಾಗಿ ಪೌರಾಯುಕ್ತ ಕೆ. ಪರಮೇಶ್, ಕಂದಾಯಾಧಿಕಾರಿ ಎಂ.ಎಸ್ ರಾಜ್‌ಕುಮಾರ್, ಸಹಾಯಕ ಕಾರ್ಯಪಾಲ ಅಭಿಯಂತರ ಶ್ರೀರಂಗರಾಜಪುರೆ, ಪರಿಸರ ಅಭಿಯಂತರ ಪ್ರಭಾಕರ್, ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ತಾಲೂಕು ಅಧ್ಯಕ್ಷ ಮಂಜುನಾಥ್ ಹಾಗು ಸಿಬ್ಬಂದಿ ವರ್ಗದವರು, ನಗರಸಭೆ ಸದಸ್ಯರು ಸೇರಿದಂತೆ ಇನ್ನಿತರರು ನಾಡಹಬ್ಬ ದಸರಾ ಉದ್ಘಾಟನೆಗೆ ಆಗಮಿಸಿದ ಕೃಷ್ಣ ಎಸ್ ಭಟ್ ಅವರನ್ನು ಸ್ವಾಗತಿಸಿದರು.
No comments:
Post a Comment