ಭದ್ರಾವತಿ ತಾಲೂಕಿನ ಸುಲ್ತಾನ್‌ಮಟ್ಟಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸೋಮವಾರ ವಿಜ್ಞಾನ ಶಾಸ್ತ್ರ ಮತ್ತು ಗಣಿತ ಶಾಸ್ತ್ರದ ನೂತನ ಪ್ರಯೋಗಾಲಯವನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಇನ್ನಿತರರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಭದ್ರಾವತಿ, ಅ. ೪: ತಾಲೂಕಿನ ಸುಲ್ತಾನ್‌ಮಟ್ಟಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸೋಮವಾರ ವಿಜ್ಞಾನ ಶಾಸ್ತ್ರ ಮತ್ತು ಗಣಿತ ಶಾಸ್ತ್ರದ ನೂತನ ಪ್ರಯೋಗಾಲಯವನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
ಶಾಲೆಯ ಶೈಕ್ಷಣಿಕ ಚಟುವಟಿಕೆಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಶಾಸಕರು ಪ್ರಯೋಗಾಲಯ ನಿರ್ಮಾಣಕ್ಕೆ ಸುಮಾರು ೪೦ ಸಾವಿರ ರು. ಸ್ವಂತ ಹಣ ವ್ಯಯ ಮಾಡಿರುವ ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ ರೇವಣಪ್ಪ ಮತ್ತು ಸಹ ಶಿಕ್ಷಕ ಆನಂದ್‌ರವರನ್ನು ಅಭಿನಂದಿಸಿದರು.
ಶಾಲೆಯ ಮುಖ್ಯ ಶಿಕ್ಷಕರು ಹಾಗು ಎಸ್‌ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು ಮಾತನಾಡಿ, ಮುಂಬರುವ ಶೈಕ್ಷಣಿಕ ಸಾಲಿನಿಂದ ಪ್ರತಿ ವರ್ಷ ಶಾಲೆಗೆ ಹೊಸದಾಗಿ ದಾಖಲಾಗುವ ಪ್ರತಿ ಮಗುವಿಗೆ ೨೦೦೦ ರು. ಉಚಿತ ಬಾಂಡ್ ನೀಡುವ ವಿನೂತನ ಯೋಜನೆ ಜಾರಿಗೊಳಿಸಲಾಗುತ್ತದೆ ಎಂದು ತಿಳಿಸಿದರು.
ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿ ಗಣೇಶ್, ಸಿಆರ್‌ಪಿ ಲಿಂಗರಾಜ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಉತ್ತರೇಶ್ ಹಾಗು ಸದಸ್ಯರು, ಕಾಂಗ್ರೆಸ್ ಯುವ ಮುಖಂಡ ಗಣೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment