ಭದ್ರಾವತಿ ತಾಲೂಕಿನ ಅರಕೆರೆ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಮನೆಯೊಂದರ ಗೋಡೆ ಕುಸಿದು ಬಿದ್ದ ಪರಿಣಾಮ ವಯೋವೃದ್ದೆ ರತ್ನಮ್ಮ ಮೃತಪಟ್ಟಿರುವುದು.
ಭದ್ರಾವತಿ: ತಾಲೂಕಿನ ಅರಕೆರೆ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಮನೆಯೊಂದರ ಗೋಡೆ ಕುಸಿದು ಬಿದ್ದ ಪರಿಣಾಮ ವಯೋವೃದ್ದೆಯೋರ್ವರು ಮೃತಪಟ್ಟಿರುವ ಘಟನೆ ನಡೆದಿದೆ.
ರತ್ನಮ್ಮ(೬೫) ಮೃತಪಟ್ಟಿದ್ದು, ರಾತ್ರಿ ವೇಳೆ ಗೋಡೆ ಕುಸಿದಿದೆ ಎನ್ನಲಾಗಿದೆ. ಮನೆಯಲ್ಲಿ ರತ್ನಮ್ಮ ಒಬ್ಬರೇ ಇದ್ದಾಗ ಈ ಘಟನೆ ನಡೆದಿದ್ದು, ಈ ಹಿನ್ನಲೆಯಲ್ಲಿ ಈ ಘಟನೆ ಯಾರಿಗೂ ತಿಳಿದಿಲ್ಲ. ಬೆಳಿಗ್ಗೆ ಇವರ ಮಗ ಮನೆಗೆ ಬಂದಾಗ ಬೆಳಕಿಗೆ ಬಂದಿದೆ. ಸ್ಥಳಕ್ಕೆ ತಹಸೀಲ್ದಾರ್ ಕಛೇರಿ ಸಿಬ್ಬಂಧಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಾಜಿ ಜಿಪಂ ಸದಸ್ಯ ಎಚ್.ಎಂ. ಷಡಾಕ್ಷರಿ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವಾನ ಹೇಳಿದರು.
ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವ ಸಂಬಂಧ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ ಎಂದು ತಹಸೀಲ್ದಾರ್ ಆರ್. ಪ್ರದೀಪ್ ತಿಳಿಸಿದರು.
ಭದ್ರಾವತಿ: ತಾಲೂಕಿನ ಅರಕೆರೆ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಮನೆಯೊಂದರ ಗೋಡೆ ಕುಸಿದು ಬಿದ್ದಿರುವುದು.
No comments:
Post a Comment