ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ಭದ್ರಾವತಿ ಹೊಸ ಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಬೃಹತ್ ರಕ್ತದಾನ ಶಿಬಿರಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ ನೀಡಿದರು.
ಭದ್ರಾವತಿ, ನ. ೧: ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ನಗರದ ಹೊಸ ಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಬೃಹತ್ ರಕ್ತದಾನ ಶಿಬಿರಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಚಾಲನೆ ನೀಡಿದರು.
ವಿದ್ಯಾಸಂಸ್ಥೆಯ ಪದನಿಮಿತ್ತ ಅಧ್ಯಕ್ಷ ಸಿದ್ದಬಸಪ್ಪ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ತಹಸೀಲ್ದಾರ್ ಆರ್. ಪ್ರದೀಪ್, ವಿದ್ಯಾಸಂಸ್ಥೆಯ ಅಧ್ಯಕ್ಷ ಬಿ.ಎಲ್ ರಂಗಸ್ವಾಮಿ, ನಗರಸಭೆ ಪೌರಾಯುಕ್ತ ಕೆ. ಪರಮೇಶ್, ಸದಸ್ಯರಾದ ಬಿ.ಎಂ ಮಂಜುನಾಥ್, ಸುದೀಪ್ ಕುಮಾರ್, ಶೃತಿ ವಸಂತ್, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ವಿದ್ಯಾಸಂಸ್ಥೆ ಆಡಳಿತಾಧಿಕಾರಿ ರಾಕೇಶ್, ಸಹಾಯಕ ಆಡಳಿತಾಧಿಕಾರಿ, ದೈಹಿಕ ಶಿಕ್ಷಣ ನಿರ್ದೇಶಕ ಶಿವಲಿಂಗೇಗೌಡ, ಪ್ರಮುಖರಾದ ಲಯನ್ಸ್ ಕ್ಲಬ್ ಅಧ್ಯಕ್ಷ ಬಿ.ಎಸ್ ಮಹೇಶ್‌ಕುಮಾರ್, ಡಾ. ಜಿ.ಎಂ ನಟರಾಜ್, ರಾಜಪ್ಪ, ಎಂ.ಎಸ್ ಬಸವರಾಜ್, ಎಚ್.ಎಲ್ ಷಡಾಕ್ಷರಿ, ಬಸವಂತರಾವ್ ದಾಳೆ, ಯು. ಮಹಾದೇವಪ್ಪ, ಶ್ರೀಕಾಂತ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಶಿಬಿರದಲ್ಲಿ ಪ್ರಮುಖರಾದ ತಹಸೀಲ್ದಾರ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ, ಕಸಾಪ ತಾಲೂಕು ಅಧ್ಯಕ್ಷರು ಸೇರಿದಂತೆ ಸುಮಾರು ೫೦ ಮಂದಿ ರಕ್ತದಾನ ಮಾಡಿದರು.
Very nice event
ReplyDelete