ಕರ್ನಾಟಕ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಭದ್ರಾವತಿ ತಾಲೂಕು ಕಚೇರಿ ಸಭಾಂಗಣದಲ್ಲಿ ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್ ನೇತೃತ್ವದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಯಿತು.
ಭದ್ರಾವತಿ, ನ. ೧೧: ಕರ್ನಾಟಕ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ತಾಲೂಕು ಕಚೇರಿ ಸಭಾಂಗಣದಲ್ಲಿ ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್ ನೇತೃತ್ವದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಯಿತು.
ಸಭೆಯಲ್ಲಿ ಟಿ.ವಿ ಪ್ರಕಾಶ್‌ರವರು ಚುನಾವಣಾ ಪೂರ್ವ ಸಿದ್ಧತೆ ವಿವರವಾದ ಮಾಹಿತಿ ನೀಡಿದರು. ತಹಶೀಲ್ದಾರ್ ಆರ್. ಪ್ರದೀಪ್‌ರವರು ಚುನಾವಣಾ ಪ್ರಕ್ರಿಯೆಗಳು ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ವಹಿಸಿಕೊಡಬಹುದಾದ ಕಾರ್ಯವೈಖರಿಗಳ ಬಗ್ಗೆ ವಿವರಿಸಿದರು.
ಮತಗಟ್ಟೆ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳಾದ ಬೆಳಕಿನ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ, ವಿಕಲಚೇತನರು ಹಾಗು ವಯೋವೃದ್ಧರಿಗೆ ಮತಗಟ್ಟೆ ಕೊಠಿಡಿಗೆ ತೆರಳಲು ಸೂಕ್ತ ವ್ಯವಸ್ಥೆ ಸೇರಿದಂತೆ ಅಂಶಗಳ (ಎ.ಎಂ.ಎಫ್)ಬಗ್ಗೆ ಪರಿಶೀಲಿಸಿ ವರದಿ ನೀಡುವುದು ಹಾಗು ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.
ಮಾದರಿ ನೀತಿ ಸಂಹಿತೆ ಜಾರಿಗೆ ಸಂಬಂಧಪಟ್ಟಂತೆ ರಚಿಸಲಾಗುವ ತಂಡಗಳಿಗೆ ಪೊಲೀಸ್ ಇಲಾಖೆಯಿಂದ ಒಬ್ಬ ಎ.ಎಸ್.ಐ ಅಥವಾ ಹೆಚ್.ಸಿ ದರ್ಜೆಯ ಅಧಿಕಾರಿಗಳನ್ನು ನಿಯೋಜಿಸುವಂತೆ ರಕ್ಷಣಾ ಇಲಾಖೆಯವರಿಗೆ ಸೂಚಿಸಲಾಯಿತು.
ಸಭೆಯಲ್ಲಿ ಪೊಲೀಸ್ ಉಪಾಧೀಕ್ಷಕ ಸಾಹಿಲ್ ಬಾಗ್ಲಾ . ನಗರಸಭೆ ಪೌರಾಯುಕ್ತ ಕೆ. ಪರಮೇಶ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಮೇಶ್ ಹಾಗೂ ವಿವಿಧ ಪೊಲೀಸ್ ಠಾಣೆಗಳ ವೃತ್ತ ನಿರೀಕ್ಷಕರು ಗಳು ಮತ್ತು ಅಬಕಾರಿ ಇಲಾಖೆಯ ವೃತ್ತ ನಿರೀಕ್ಷಕರು, ಎಲ್ಲಾ ಹೋಬಳಿಯ ಉಪತಹಶೀಲ್ದಾರ್‌ಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ರಾಜಸ್ವ ನಿರೀಕ್ಷಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment