ಸುಧಾಕರ ಶೆಟ್ಟಿ
ಭದ್ರಾವತಿ, ನ. ೧೬: ತಾಲೂಕು ತುಳುಕೂಟದ ಸರ್ವ ಸದಸ್ಯರ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಸುಧಾಕರ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜನ್ನಾಪುರ ಬಂಟರ ಭವನದಲ್ಲಿ ನಡೆದ ಸಭೆಯಲ್ಲಿ ಉಪಾಧ್ಯಕ್ಷರಾಗಿ ಪ್ರಕಾಶ್ ಪಿಂಟೋ, ಪ್ರಧಾನ ಕಾರ್ಯದರ್ಶಿಯಾಗಿ ಡಾ. ಹರೀಶ ದೇಲಂತಬೆಟ್ಟು, ಖಜಾಂಚಿಯಾಗಿ ಡಾ. ವೈ. ಆನಂದ್, ಕಾರ್ಯದರ್ಶಿಗಳಾಗಿ ನಾರಾಯಣ ಪೂಜಾರಿ ಮತ್ತು ಬಿ. ಸುಬ್ಬಣ್ಣ ಆಯ್ಕೆಯಾಗಿದ್ದಾರೆ.
ಆರಂಭದಲ್ಲಿ ನಿಧನ ಹೊಂದಿದ ಸಂಘದ ಸದಸ್ಯರಿಗೆ ಸಂತಾಪ ಸೂಚಿಸಿ ಮೌನಾಚರಣೆ ನಡೆಸಲಾಯಿತು. ವಾರ್ಷಿಕ ವರದಿ ಹಾಗು ಲೆಕ್ಕಪತ್ರ ಮಂಡನೆ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಜರುಗಿದವು. ಬಂಟರ ಸಂಘದ ಅಧ್ಯಕ್ಷ ಬಿ. ದಿವಾಕರ ಶೆಟ್ಟಿ, ರೋಟರಿ ಕ್ಲಬ್ ಅಧ್ಯಕ್ಷ ಆದರ್ಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷ ಪ್ರಕಾಶ್ ಪಿಂಟೋ ಅಧ್ಯಕ್ಷತೆ ವಹಿಸಿದ್ದರು. ಕಳೆದ ಕೆಲವು ತಿಂಗಳು ಹಿಂದೆ ತುಳುಕೂಟದ ಅಧ್ಯಕ್ಷರಾಗಿದ್ದ ಹಿರಿಯ ವೈದ್ಯ ಡಾ. ಯು. ಕರುಣಾಕರ ಶೆಟ್ಟಿಯವರು ನಿಧನ ಹೊಂದಿದ ಹಿನ್ನಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ಸುಧಾಕರ ಶೆಟ್ಟಿಯವರು ಆಯ್ಕೆಯಾಗಿದ್ದಾರೆ.
No comments:
Post a Comment