ದೀಪ ಬೆಳಗಿಸಿದ ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ ಭಾನುಪ್ರಕಾಶ್
ಪ್ರತಿ ವರ್ಷದಂತೆ ಈ ಬಾರಿ ಸಹ ಭದ್ರಾವತಿ ಸಮೀಪದ ಎಂ.ಸಿ ಹಳ್ಳಿ ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಶಿವಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ತಿಕ ದೀಪೋತ್ಸವದಲ್ಲಿ ಶುಕ್ರವಾರ ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ ಭಾನುಪ್ರಕಾಶ್ ದೀಪ ಬೆಳಗಿಸಿದರು.
ಭದ್ರಾವತಿ, ನ. ೧೯: ಪ್ರತಿ ವರ್ಷದಂತೆ ಈ ಬಾರಿ ಸಹ ಇಲ್ಲಿಗೆ ಸಮೀಪದ ಎಂ.ಸಿ ಹಳ್ಳಿ ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಶಿವಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ತಿಕ ದೀಪೋತ್ಸವದಲ್ಲಿ ಶುಕ್ರವಾರ ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ ಭಾನುಪ್ರಕಾಶ್ ದೀಪ ಬೆಳಗಿಸಿದರು.
ದೀಪೋತ್ಸವದ ಅಂಗವಾಗಿ ಶ್ರೀ ಕ್ಷೇತ್ರದ ಶ್ರೀ ಮುರುಗೇಶ್ ಸ್ವಾಮೀಜಿ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಆಚರಣೆಗಳು ಜರುಗಿದವು. ದೇವಸ್ಥಾನದ ಮೇಲ್ಭಾಗದಲ್ಲಿ ಸುಮಾರು ೧೦೦ ಲೀಟರ್ ಎಣ್ಣೆ ತುಂಬುವ ಸಾಮರ್ಥ್ಯದ ದೀಪವನ್ನು ವಿಶೇಷವಾಗಿ ಬೆಳಗಿಸುವುದು ಇಲ್ಲಿ ವಾಡಿಕೆಯಾಗಿದೆ. ಅಲ್ಲದೆ ಪಟಾಕಿ ಸಿಡ್ಡಿಮದ್ದುಗಳ ಪ್ರದರ್ಶನ ನಡೆಸಿ ಸಿಹಿ ಹಂಚುವ ಮೂಲಕ ಸಂಭ್ರಮಿಸಲಾಗುತ್ತದೆ.
ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಕೆ ಶ್ರೀನಾಥ್, ದೇವಸ್ಥಾನ ಟ್ರಸ್ಟ್ ಸದಸ್ಯರಾದ ಭೂಪಾಲ್, ಶಿವಕುಮಾರ್, ದೊರಸ್ವಾಮಿ, ಸತ್ಯನಾರಾಯಣ, ಷಣ್ಮುಖ, ಸುಂದರ ಬಾಬು, ಮಂಜುನಾಥ್, ಬದ್ರಿ, ಆಡಳಿತ ಮಂಡಳಿಯ ಚಂದ್ರಘೋಷನ್, ಡಾ. ವಿಕ್ರಂ, ಕಾರ್ತಿಕ್ ಹಾಗೂ ತಮಿಳುನಾಡು, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ವಿವಿಧೆಡೆಗಳಿಂದ ಭಕ್ತಾಧಿಗಳು ಪಾಲ್ಗೊಂಡಿದ್ದರು.
No comments:
Post a Comment