ಭದ್ರಾವತಿ ನ್ಯೂಟೌನ್ ಅಮಲೋದ್ಭವಿ ಮಾತೆ ದೇವಾಲಯ
ಭದ್ರಾವತಿ, ನ. ೨೬: ನಗರದ ನ್ಯೂಟೌನ್ ಅಮಲೋದ್ಭವಿ ಮಾತೆಯ ದೇವಾಲಯದ ೮೩ನೇ ವರ್ಷದ ವಾರ್ಷಿಕೋತ್ಸವ ನ.೨೮ ರಿಂದ ಡಿ.೮ರ ವರೆಗೆ ನಡೆಯಲಿದೆ.
ಜಗದ್ಗುರು ಪೋಪ್‌ರವರ ಕರೆಯೋಲೆಯಂತೆ ೨೦೨೩ರಲ್ಲಿ ನಡೆಯುವ ವಿಶ್ವ ಸಿನೋದ್ ಸಭೆಯ ಸಿದ್ದತಾ ಪ್ರಕ್ರಿಯೆಗಳಿಗೆ ಪೂರಕವಾಗಿರುವಂತೆ ಈ ಬಾರಿ ಹಲವು ಕಾರ್ಯಕ್ರಮಗಳೊಂದಿಗೆ 'ಅಮಲೋದ್ಭವಿ ಮಾತೆಯೊಡನೆ ಅನ್ಯೋನ್ಯತೆ, ಸಹಭಾಗಿತ್ವ ಮತ್ತು ಸುವಾರ್ತಾ ಸೇವೆಯೆಡೆಗೆ ಜೊತೆಯಾಗಿ ನಮ್ಮ ಪಯಣ' ಎಂಬ ಶೀರ್ಷಿಕೆಯೊಂದಿಗೆ ವಾರ್ಷಿಕೋತ್ಸವ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಈ ಸಂಬಂಧ ಪ್ರತಿದಿನ ಸಂಜೆ ೫.೩೦ ರಿಂದ ಜಪಸರ ಪ್ರಾರ್ಥನೆ, ಪೂಜೆ ಮತ್ತು ಪ್ರಬೋಧನೆಗಳು ಜರುಗಲಿವೆ.
ನ.೨೮ರಂದು ಸಂಜೆ ೫.೩೦ಕ್ಕೆ ಧ್ವಜಾರೋಹಣ, ಜಪಸರ ಪ್ರಾರ್ಥನೆ, ಪೂಜೆ ಮತ್ತು ಪ್ರಬೋಧನೆಯೊಂದಿಗೆ ವಾರ್ಷಿಕೋತ್ಸವಕ್ಕೆ ಚಾಲನೆ ದೊರೆಯಲಿದೆ. ಶಿವಮೊಗ್ಗ ಗುಡ್ ಶೆಪರ್ಡ್ ಧರ್ಮಕೇಂದ್ರದ ಗುರು ಫಾದರ್ ವಿರೇಶ್ ಮೋರಾಸ್ ಅಮಲೋದ್ಭವಿ ಮಾತೆ, ಅನ್ಯೋನ್ಯತೆ, ಸಹಭಾಗಿತ್ವ ಮತ್ತು ಸುವಾರ್ತಾ ಸೇವೆಯೆಡೆಗೆ ಜೊತೆಯಾಗಿ ಸಾಗುವ ನಮ್ಮ ಪಯಣಕ್ಕೆ ದಾರಿದೀಪ ವಿಷಯ ಕುರಿತು ಮಾತನಾಡಲಿದ್ದಾರೆ.
ನ.೨೯ರಂದು ನಡೆಯುವ ಕಾರ್ಯಕ್ರಮದಲ್ಲಿ ಅಮಲೋದ್ಭವಿ ಮಾತೆ ಜಪಸರ ಮಾಡಲು ಪ್ರೇರೆಪಿಸಿದ ತಾಯಿ ವಿಷಯ ಕುರಿತು ಮಾವಿನಕೆರೆ ಕಿರಿಯ ಪುಷ್ಪ ಸಂತ ತೆರೇಸಮ್ಮನವರ ಸುವಾರ್ತ ಕೇಂದ್ರದ ಧರ್ಮಗುರು ಫಾದರ್ ವೀನಸ್ ಪ್ರವೀಣ್, ನ.೩೦ರಂದು ಅಮಲೋದ್ಭವಿ ಮಾತೆ ತಾಳ್ಮೆಯ ನಿಧಿ ವಿಷಯ ಕುರಿತು ಶಿವಮೊಗ್ಗ ಸೇಕೆರ್ಡ್ ಆರ್ಟ್ ಶಾಲೆ ಪ್ರಾಂಶುಪಾಲ ಫಾದರ್ ಲಾರೆನ್ಸ್, ಡಿ.೧ರಂದು ಅಮಲೋದ್ಭವಿ ಮಾತೆ ವಿಧೇಯತೆಯ ಮಾಗದರ್ಶಿ ವಿಷಯ ಕುರಿತು ಹಿರಿಯೂರು ವಿಯಾನ್ನಿ ಪ್ರೇಷಿತರ ಗೃಹದ ನಿರ್ದೇಶಕ ಫಾದರ್ ಸಂತೋಷ್, ಡಿ.೨ರಂದು ಅಮಲೋದ್ಭವಿ ಮಾತೆ ಪ್ರಾರ್ಥನೆ ಮಾಡಲು ಆದರ್ಶ ವಿಷಯ ಕುರಿತು ಕಾಗದನಗರ ಸಂತ ಜೋಸೆಫ್‌ರ ದೇವಾಲಯದ ಎಸ್‌ಡಿಬಿ ಫಾದರ್ ಡೋಮಿನಿಕ್, ಡಿ.೩ರಂದು ಅಮಲೋದ್ಭವಿ ಮಾತೆ ಅಚಲ ವಿಶ್ವಾಸದ ರಾಣಿ ವಿಷಯ ಕುರಿತು ಉಜ್ಜನಿಪುರ ಡಾನ್ ಬೋಸ್ಕೋ ಐಟಿಐ ನಿರ್ದೇಶಕ ಎಸ್‌ಡಿಬಿ ಫಾದರ್ ಆರೋಗ್ಯರಾಜ್ ಮತ್ತು ಡಿ.೪ರಂದು ಅಮಲೋದ್ಭವಿ ಮಾತೆ ದೇವರ ವಾಕ್ಯವನ್ನು ನಿಷ್ಠೆಯಿಂದ ಪಾಲಿಸಿದ ತಾಯಿ ವಿಷಯ ಕುರಿತು ಹಿರಿಯೂರು ಸ್ವರ್ಗ ಸ್ವೀಕೃತ ಮಾತೆಯ ದೇವಾಲಯದ ಧರ್ಮಗುರು ಫಾದರ್ ಫ್ರಾಂಕ್ಲಿನ್ ಡಿಸೋಜ ಮಾತನಾಡಲಿದ್ದಾರೆ.
ಡಿ.೫ರಂದು ಫಾದರ್ ಫ್ರಾಂಕ್ಲಿನ್ ಡಿಸೋಜ ನೇತೃತ್ವದಲ್ಲಿ ಬ್ರದರ್ ಟಿ.ಕೆ ಜಾರ್ಜ್ ಮತ್ತು ತಂಡದವರಿಂದ ರೋಗಿಗಳಿಗೆ ವಿಶೇಷ ಪ್ರಾರ್ಥನೆ ಒಳಗೊಂಡಂತೆ ಧ್ಯಾನಕೂಟ, ಡಿ.೬ರಂದು ಜೇಡಿಕಟ್ಟೆ ಆಶಾಕಿರಣ ನಿರ್ದೇಶಕ ಫಾದರ್ ಪ್ರಕಾಶ್ ನೇತೃತ್ವದಲ್ಲಿ ಅಮಲೋದ್ಭವಿ ಮಾತೆ ಭಕ್ತಿಯ ಸುಧೆ ಕಾರ್ಯಕ್ರಮ ನಡೆಯಲಿದ್ದು, ಡಿ.೭ರಂದು ಕಡೂರಿನ ನಿತ್ಯಾಧಾರ ಮಾತೆ ದೇವಾಲಯದ ಧರ್ಮಗುರು ಫಾದರ್ ರಾಜೇಂದ್ರ ಅಮಲೋದ್ಭವಿ ಮಾತೆ ಕುಟುಂಬಗಳ ಮಹಾರಾಣಿ ವಿಷಯ ಕುರಿತು ಹಾಗು ಡಿ.೮ರಂದು ಹಾಸನ ಸಂತ ಅಂತೋಣಿಯವರ ದೇವಾಲಯದ ಧರ್ಮಗುರು ಫಾದರ್ ಜೋನಾಸ್ ಪ್ಯಾಟ್ರಿಕ್ ರಾವ್ ಅಮಲೋದ್ಭವಿ ಮಾಥೆ ಉದಾರತೆಯ ಗಣಿ ವಿಷಯ ಕುರಿತು ಮಾತನಾಡಲಿದ್ದಾರೆ.
ಡಿ.೭ರಂದು ಸಂಜೆ ಅಲೋದ್ಭವಿ ಮಾತೆಯ ಭವ್ಯ ತೇರಿನ ಮೆರವಣಿಗೆ, ಭಕ್ತರಿಗೆ ಆಶೀರ್ವಾದ ಹಾಗು ಅನ್ನಸಂತರ್ಪಣೆ ಕಾರ್ಯಕ್ರಮಗಳು ಹಾಗು ಡಿ.೮ರಂದು ಸಂಜೆ ಅಡಂಬರದ ಬಲಿ ಪೂಜೆ, ವಿಶೇಷ ದಾನಿಗಳ ಸರಣೆ ಮತ್ತು ಸನ್ಮಾನ ಕಾರ್ಯಕ್ರಮಗಳೊಂದಿಗೆ ವಾರ್ಷಿಕೋತ್ಸವ ಮುಕ್ತಾಯಗೊಳ್ಳಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ದೇವಾಲಯದ ಧರ್ಮಗುರು ಫಾದರ್ ಲಾನ್ಸಿ ಡಿಸೋಜ ಮತ್ತು ಪಾಲನ ಪರಿಷತ್ ಕಾರ್ಯದರ್ಶಿ ಅಂತೋಣಿ ವಿಲ್ಸನ್ ಕೋರಿದ್ದಾರೆ.
No comments:
Post a Comment