ನಕಲಿ ನೋಟುಗಳ ಚಲಾವಣೆ ಮಾಡಲು ಯತ್ನಿಸುತ್ತಿದ್ದ ಇಬ್ಬರು ಯುವಕರನ್ನು ಭದ್ರಾವತಿ ಹಳೇನಗರ ಠಾಣೆ ಪೊಲೀಸರು ಬಂಧಿಸಿ ನಕಲಿ ನೋಟುಗಳನ್ನು ವಶಪಡಿಸಿಕೊಂಡಿರುವುದು.
ಭದ್ರಾವತಿ, ನ. ೨೬: ನಕಲಿ ನೋಟುಗಳ ಚಲಾವಣೆ ಮಾಡಲು ಯತ್ನಿಸುತ್ತಿದ್ದ ಇಬ್ಬರು ಯುವಕರನ್ನು ಹಳೇನಗರ ಠಾಣೆ ಪೊಲೀಸರು ಬಂಧಿಸಿ ನಕಲಿ ನೋಟುಗಳನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
ತರೀಕೆರೆ ನಿವಾಸಿ ಅರುಣ್‌ಕುಮಾರ್(೨೩) ಮತ್ತು ಶಿವಮೊಗ್ಗ ನಿವಾಸಿ ಪ್ರೇಮ್‌ರಾಜ್(೨೩) ಬಂಧಿತರಾಗಿದ್ದು, ಈ ಇಬ್ಬರು ಹಳೇನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಕಲಿ ನೋಟುಗಳ ಚಲಾವಣೆಗೆ ಯತ್ನಿಸುತ್ತಿದ್ದಾಗ ಖಚಿತ ಮಾಹಿತಿ ಆಧಾರ ಮೇಲೆ ಜಿಲ್ಲಾ ರಕ್ಷಣಾಧಿಕಾರಿಗಳ ಮಾರ್ಗದರ್ಶನದಲ್ಲಿ ದಾಳಿ ನಡೆಸಿ ಬಂಧಿಸಲಾಗಿದೆ. ಇವರಿಂದ ರು.೫೦೦ ಮುಖ ಬೆಲೆಯ ೧೮೨ ನಕಲಿ ನೋಟುಗಳನ್ನು ಹಾಗು ನೋಟುಗಳ ಮುದ್ರಣಕ್ಕೆ ಬಳಸುತ್ತಿದ್ದ ಯಂತ್ರವನ್ನು ವಶಕ್ಕೆ ಪಡೆಯಲಾಗಿದೆ.
ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ. ಕಾರ್ಯಾಚರಣೆಯಲ್ಲಿ ಹಳೇನಗರ ಪೊಲೀಸ್ ಠಾಣಾಧಿಕಾರಿ ಹಾಗು ಸಿಬ್ಬಂದಿಗಳು ಪಾಲ್ಗೊಂಡಿದ್ದರು.
No comments:
Post a Comment