ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಪ್ರಮುಖರಿಂದ ಹಕ್ಕು ಚಲಾವಣೆ
ಭದ್ರಾವತಿ ತಾಲೂಕು ಕಚೇರಿಯಲ್ಲಿ ಭಾನುವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ತಮ್ಮ ಹಕ್ಕನ್ನು ಚಲಾಯಿಸಿದರು.
ಭದ್ರಾವತಿ, ನ. ೨೧: ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ ಮತದಾನ ಭಾನುವಾರ ತಾಲೂಕು ಕಛೇರಿ ಮಿನಿ ವಿಧಾನಸೌಧದಲ್ಲಿ ನಡೆಯಿತು. ಶೇ.೫೫ರಷ್ಟು ಮತದಾನ ನಡೆದಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಪ್ರಮುಖರು ಮತದಾನ ಮಾಡಿದರು.
ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ ಮತದಾನ ಭಾನುವಾರ ಭದ್ರಾವತಿ ತಾಲೂಕು ಕಛೇರಿ ಮಿನಿ ವಿಧಾನಸೌಧದಲ್ಲಿ ನಡೆಯಿತು. ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು.
ತಾಲೂಕಿನಲ್ಲಿ ಒಟ್ಟು ೧೨೦೨ ಮತದಾರರಿದ್ದು, ಈ ಪೈಕಿ ೬೫೭ ಮಂದಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಬೆಳಿಗ್ಗೆ ೮ ಗಂಟೆಯಿಂದ ಆರಂಭವಾದ ಮತದಾನ ಮಧ್ಯಾಹ್ನ ೧ ಗಂಟೆವರೆಗೂ ಬಿರುಸಿನ ನಡೆಯಿತು. ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಪ್ರಮುಖರು ತಮ್ಮ ಹಕ್ಕನ್ನು ಚಲಾಯಿಸುವ ಮೂಲಕ ಗಮನ ಸೆಳೆದರು.
ಸುಮಾರು ೮೫ ವರ್ಷ ವಯೋಮಾನದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಕೆ. ಶ್ಯಾಮಣ್ಣ ಸಹಾಯಕರೊಂದಿಗೆ ಆಗಮಿಸಿ ಮತಚಲಾಯಿಸಿದರು.
ರಾಜ್ಯಾಧ್ಯಕ್ಷ ಹಾಗು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಅಭ್ಯರ್ಥಿಗಳ ಪರವಾಗಿ ಮಿನಿವಿಧಾನಸೌಧದ ಸಮೀಪ ಬೆಂಬಲಿಗರು ಮತಯಾಚನೆ ನಡೆಸಿದರು.
ರಾಜ್ಯಾಧ್ಯಕ್ಷ ಹಾಗು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಅಭ್ಯರ್ಥಿಗಳ ಪರವಾಗಿ ಮಿನಿವಿಧಾನಸೌಧದ ಸಮೀಪ ಬೆಂಬಲಿಗರು ಮತಯಾಚನೆ ನಡೆಸಿದರು. ಪರಿಷತ್ ಅಧ್ಯಕ್ಷರಾದ ಡಿ. ಮಂಜುನಾಥ್ ಮತ್ತು ಹಾಲಿ ಅಧ್ಯಕ್ಷ ಡಿ.ಬಿ ಶಂಕರಪ್ಪನವರ ನಡುವೆ ಹೆಚ್ಚಿನ ಪೈಪೋಟಿ ಇರುವುದು ಕಂಡು ಬಂದಿತು.
ಯಾವುದೇ ಚುನಾವಣೆಗೆ ಕಡಿಮೆ ಇಲ್ಲದಂತೆ ಈ ಚುನಾವಣೆ ಸಹ ಕಂಡು ಬಂದಿದ್ದು, ಮತಗಟ್ಟೆ ಸುತ್ತಮುತ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಮತದಾರರು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು.
ಡಿ. ಶಂಕರಪ್ಪಗೆ ಹೆಚ್ಚು ಮತ :
ಕಸಾಪ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪುನರಾಯ್ಕೆ ಬಯಸಿ ಸ್ಪರ್ಧಿಸಿರುವ ಹಾಲಿ ಅಧ್ಯಕ್ಷ ಡಿ. ಶಂಕರಪ್ಪ ಅವರಿಗೆ ೩೭೫ ಮತಗಳು ಲಭಿಸಿದ್ದು, ಮಾಜಿ ಅಧ್ಯಕ್ಷ ಡಿ. ಮಂಜುನಾಥ್‌ಗೆ ೨೫೨ ಮತಗಳು ಲಭಿಸಿವೆ. ಒಟ್ಟು ಚಲಾವಣೆಗೊಂಡಿರುವ ೬೫೭ ಮತಗಳಲ್ಲಿ ೬೨೭ ಮತಗಳು ಈ ಇಬ್ಬರ ಪಾಲಾಗಿದ್ದು, ಉಳಿದ ೩೦ ಮತಗಳು ಇನ್ನಿಬ್ಬರು ಅಭ್ಯರ್ಥಿಗಳ ಪಾಲಾಗಿವೆ.
No comments:
Post a Comment