ಪುನೀತ್ ರಾಜ್‌ಕುಮಾರ್ ಜನ್ಮದಿನ 'ನೇತ್ರದಾನ' ದಿನವಾಗಿಸಿ
ಭದ್ರಾವತಿ, ನ. ೧೬: ಇತ್ತೀಚೆಗೆ ನಿಧನ ಹೊಂದಿದ ಚಲನಚಿತ್ರ ನಟ, ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಘೋಷಣೆ ಮಾಡಿರುವುದಕ್ಕೆ ನಗರದ ಚಾಮೇಗೌಡ ಏರಿಯಾ ಬಿ.ಎಚ್ ರಸ್ತೆ ಡಾ. ರಾಜ್‌ಕುಮಾರ್ ಅಭಿಮಾನಿಗಳ ಸಂಘ ಕೃತಜ್ಞತೆ ಸಲ್ಲಿಸಿದೆ.
ಪುನೀತ್ ರಾಜ್‌ಕುಮಾರ್‌ರವರ ಸಾಧನೆ ಅಪಾರವಾಗಿದ್ದು, ಪ್ರತಿಯೊಬ್ಬರ ಮನದಾಳದ ವ್ಯಕ್ತಿಯಾಗಿ ನೆಲೆ ನಿಂತಿದ್ದಾರೆ. ಅವರಿಗೆ ಗೌರವ ಸೂಚಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮರಣೋತ್ತರವಾಗಿ ಪ್ರಶಸ್ತಿ ನೀಡಲು ಮುಂದಾಗಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಈ ಹಿನ್ನಲೆಯಲ್ಲಿ ಬೊಮ್ಮಾಯಿಯವರಿಗೆ ಅಭಿಮಾನಿಗಳು, ಸಮಸ್ತ ನಾಗರೀಕರ ಪರವಾಗಿ ಸಂಘ ಕೃತಜ್ಞತೆ ಸಲ್ಲಿಸುತ್ತದೆ. ಇದರ ಜೊತೆಗೆ ಪುನೀತ್ ರಾಜ್‌ಕುಮಾರ್‌ರವರು ತಮ್ಮ ನೇತ್ರಗಳನ್ನು ದಾನ ಮಾಡುವ ಮೂಲಕ ೪ ಜನರ ಬದುಕಿನಲ್ಲಿ ಬೆಳಕಾಗಿ ಇತರರಿಗೆ ಸ್ಪೂರ್ತಿದಾಯಕರಾಗಿದ್ದಾರೆ. ಈ ಹಿನ್ನಲೆಯಲ್ಲಿ ಅವರ ಜನ್ಮದಿನವನ್ನು 'ನೇತ್ರದಾನ' ದಿನವಾಗಿ ಘೋಷಿಸಬೇಕೆಂದು ಮನವಿ ಮಾಡುತ್ತದೆ ಎಂದು ಸಂಘದ ಅಧ್ಯಕ್ಷ ವೆಂಕಟೇಶ್, ನಗರಸಭಾ ಸದಸ್ಯ ಜಾರ್ಜ್ ತಿಳಿಸಿದ್ದಾರೆ.
No comments:
Post a Comment