ನೇತ್ರದಾನ ಅಭಿಯಾನ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್
ಭದ್ರಾವತಿಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಸಾರ್ವಜನಿಕ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಭಾನುವಾರ ಚಲನಚಿತ್ರ ನಟ, ಸಮಾಜ ಸೇವಕ, ಪವರ್ ಸ್ಟಾರ್ ಪುನೀತ್‌ರಾಜ್‌ಕುಮಾರ್‌ರವರ ಸ್ಮರಣಾರ್ಥ ನಗರದ ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್ ಬಳಿ ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದ್ದ ನೇತ್ರದಾನ ಅಭಿಯಾನ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಪಾಲ್ಗೊಂಡು ಮಾತನಾಡಿದರು.
ಭದ್ರಾವತಿ, ನ. ೨೧: ಚಲನಚಿತ್ರ ನಟ ಪುನೀತ್‌ರಾಜ್‌ಕುಮಾರ್‌ರವರು ಸಮಾಜಕ್ಕೆ ನೀಡಿರುವ ಕೊಡುಗೆ ಅಪಾರವಾಗಿದ್ದು, ಅವರ ಸೇವಾ ಕಾರ್ಯಗಳು ಶ್ಲಾಘನೀಯ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಮೆಚ್ಚುಗೆ ವ್ಯಕ್ತಪಡಿಸಿದರು.
ಅವರು ಭಾನುವಾರ ನಾಲ್ವಡಿ ಕೃಷ್ಣರಾಜ ಒಡೆಯರ್ ಸಾರ್ವಜನಿಕ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಚಲನಚಿತ್ರ ನಟ, ಸಮಾಜ ಸೇವಕ, ಪವರ್ ಸ್ಟಾರ್ ಪುನೀತ್‌ರಾಜ್‌ಕುಮಾರ್‌ರವರ ಸ್ಮರಣಾರ್ಥ ನಗರದ ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್ ಬಳಿ ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದ್ದ ನೇತ್ರದಾನ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಪುನೀತ್‌ರಾಜ್‌ಕುಮಾರ್‌ರವರು ಕೇವಲ ನಟರಾಗಿ ಮಾತ್ರವಲ್ಲದೆ ಹಲವಾರು ಸಾಮಾಜಿಕ ಸೇವಾ ಕಾರ್ಯಗಳ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ವರನಟ ರಾಜ್‌ಕುಮಾರ್ ಅವರ ಕುಟುಂಬದವರು ನೇತ್ರದಾನ ಮಾಡುವ ಮೂಲಕ ಇತರರಿಗೆ ಬೆಳಕಾಗಿ ಇಂದಿಗೂ ನಮ್ಮೆಲ್ಲರ ನಡುವೆ ಉಳಿದುಕೊಂಡಿದ್ದಾರೆ. ದಾನಗಳಲ್ಲಿ ನೇತ್ರದಾನ ಶ್ರೇಷ್ಠವಾಗಿದ್ದು, ನಮ್ಮ ಸಾವಿನ ನಂತರ ಮಣ್ಣಲ್ಲಿ ಮಣ್ಣಾಗಿ ಹೋಗುವ ನೇತ್ರಗಳನ್ನು ಇತರರಿಗೆ ದಾನ ಮಾಡಿ ಅವರ ಮೂಲಕ ಜೀವಂತವಾಗಿ ಉಳಿದುಕೊಳ್ಳುವಂತಹ ವ್ಯಕ್ತಿಗಳು ನಾವಾಗಬೇಕು. ನೇತ್ರದಾನ ಅಭಿಯಾನದಂತಹ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯಬೇಕು. ಈ ಮೂಲಕ ಸಮಾಜದಲ್ಲಿ ಅಂಧತ್ವ ನಿವಾರಣೆಯಾಗಬೇಕೆಂದರು.
ಇದಕ್ಕೂ ಮೊದಲು ಉದ್ಯಮಿ ಬಿ.ಕೆ ಜಗನ್ನಾಥ, ಪ್ರಗತಿಪರ ಸಂಘಟನೆಗಳ ಮುಖಂಡರಾದ ಸುರೇಶ್, ಈ.ಬಿ ಬಸವರಾಜ್, ನ್ಯೂಟೌನ್ ಸಿದ್ದಾರ್ಥ ಅಂಧರ ಕೇಂದ್ರದ ಅಧ್ಯಕ್ಷ ಶಿವಬಸಪ್ಪ, ಶಿಕ್ಷಕ ಎ. ತಿಪ್ಪೇಸ್ವಾಮಿ ಸೇರಿದಂತೆ ಇನ್ನಿತರರು ಕಾರ್ಯಕ್ರಮ ಉದ್ಘಾಟಿಸಿದರು.
ನೇತ್ರದಾನ ಅಭಿಯಾನದ ಜೊತೆಗೆ ಸಿದ್ದಾರ್ಥ ಅಂಧರ ಕೇಂದ್ರದ ಕಲಾವಿದರಿಂದ ಪುನೀತ್‌ರಾಜ್‌ಕುಮಾರ್‌ರವರ ಅಭಿನಯದ ಚಲನಚಿತ್ರಗಳ ಸುಮಧುರ ಗೀತೆಗಳೊಂದಿಗೆ ಗೀತಾ ನಮನ, ಹಾಗು ಪುಷ್ಪ ನಮನ ಕಾರ್ಯಕ್ರಮಗಳು ಜರುಗಿದವು.
ಮಧ್ಯಾಹ್ನ ಅನ್ನಸಂತರ್ಪಣೆ ನೆರವೇರಿಸಲಾಯಿತು. ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಸೇರಿದಂತೆ ಸಾರ್ವಜನಿಕರು ನೇತ್ರದಾನ ನೋಂದಾಣಿ ಮಾಡಿಸಿಕೊಂಡರು. ಸಂಘದ ಸಂಸ್ಥಾಪಕ ಅಧ್ಯಕ್ಷ ಎಸ್.ಕೆ ಸುಧೀಂದ್ರ ಅಧ್ಯಕ್ಷತೆ ವಹಿಸಿದ್ದರು.
No comments:
Post a Comment