ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಶ್ರೀ ಕರುಮಾರಿಯಮ್ಮ ದೇವಸ್ಥಾನದ ಮುಂಭಾಗದಲ್ಲಿರುವ ಭದ್ರಾವತಿ ಪ್ರಜಾ ವಿಮೋಚನೆ ಸಂಘ (ಬಿ.ಪಿ.ಎಲ್ ಸಂಘ) ವತಿಯಿಂದ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ಭದ್ರಾವತಿ, ನ. ೧: ನಗರದ ವಿವಿಧೆಡೆ ೬೬ನೇ ಕನ್ನಡ ರಾಜ್ಯೋತ್ಸವ ಅದ್ದೂರಿಯಾಗಿ ಆಚರಿಸಲಾಯಿತು.
ಕೋವಿಡ್-೧೯ರ ಹಿನ್ನಲೆಯಲ್ಲಿ ಕಳೆದ ೨ ವರ್ಷಗಳಿಂದ ರಂಗು ಕಳೆದುಕೊಂಡಿದ್ದ ಕನ್ನಡ ರಾಜ್ಯೋತ್ಸವ ಈ ಬಾರಿ ಎಲ್ಲೆಡೆ ಆಚರಿಸಲಾಗುತ್ತಿದ್ದು, ಬಹುತೇಕ ಸಂಘಟನೆಗಳು ನ.೧ರಂದೇ ರಾಜ್ಯೋತ್ಸವ ಆಚರಿಸುವ ಮೂಲಕ ಗಮನ ಸೆಳೆದವು.
ಬಿ.ಪಿ.ಎಲ್ ಸಂಘ :
ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಶ್ರೀ ಕರುಮಾರಿಯಮ್ಮ ದೇವಸ್ಥಾನದ ಮುಂಭಾಗದಲ್ಲಿರುವ ಭದ್ರಾವತಿ ಪ್ರಜಾ ವಿಮೋಚನೆ ಸಂಘ (ಬಿ.ಪಿ.ಎಲ್ ಸಂಘ) ವತಿಯಿಂದ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ಬೆಳಿಗ್ಗೆ ಕನ್ನಡ ತಾಯಿ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಧ್ವಜಾರೋಹಣ ನೆರವೇರಿಸಿ ಸಿಹಿ ಹಂಚಲಾಯಿತು.
ಸಂಘದ ಗೌರವಾಧ್ಯಕ್ಷ ಎಸ್.ಕೆ ಸುಧೀಂದ್ರ , ಅಧ್ಯಕ್ಷ ಬಿ. ಜಗದೀಶ್, ಪ್ರಮುಖರಾದ ಎಂ. ರವಿಕುಮಾರ್, ಎ.ವಿ ಮುರುಳಿಕೃಷ್ಣ ಸೇರಿದಂತೆ ಸಂಘದ ಪದಾಧಿಕಾರಿಗಳು, ಸುತ್ತಮುತ್ತ ಅಂಗಡಿಮುಂಗಟ್ಟುಗಳ ವ್ಯಾಪಾರಸ್ಥರು, ಸ್ಥಳೀಯರು ಪಾಲ್ಗೊಂಡಿದ್ದರು.
ಎಸ್‌ಡಿಪಿಐ :
ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ತಾಲೂಕು ಶಾಖೆವತಿಯಿಂದ ೬೬ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ತಾಲೂಕು ಶಾಖೆಯ ಪ್ರಮುಖರು ಸಂಘದ ಕಛೇರಿ ಮುಂಭಾಗ ಧ್ವಜಾರೋಹಣ ನೆರವೇರಿಸುವ ಮೂಲಕ ಕನ್ನಡ ರಾಜ್ಯೋತ್ಸವ ಆಚರಿಸಿ ಗಮನ ಸೆಳೆದರು.
ಪ್ರತಿ ವರ್ಷದಂತೆ ಈ ಬಾರಿ ಸಹ ಭದ್ರಾವತಿಯಲ್ಲಿ ಕೇರಳ ಸಮಾಜಂ ಕಛೇರಿಯಲ್ಲಿ ೬೬ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ಕೇರಳ ಸಮಾಜಂ :
ಪ್ರತಿ ವರ್ಷದಂತೆ ಈ ಬಾರಿ ಸಹ ಕೇರಳ ಸಮಾಜಂ ಕಛೇರಿಯಲ್ಲಿ ೬೬ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ಸಮಾಜಂ ಅಧ್ಯಕ್ಷ ಗಂಗಾಧರ್, ಪ್ರಧಾನ ಕಾರ್ಯದರ್ಶಿ ಜಿ. ಸುರೇಶ್, ಖಜಾಂಚಿ ಎ.ಚಂದ್ರಶೇಖರ್, ಆರ್. ರಾಧಕೃಷ್ಣನ್, ಕೆ.ಸಿ ರಾಜಶೇಖರ್, ಹಾಗು ಮಹಿಳಾ ವಿಭಾಗಂ ಅಧ್ಯಕ್ಷೆ ವಿಜಯಲಕ್ಷ್ಮಿ, ಜಂಟಿ ಕಾರ್ಯದರ್ಶಿ ರೇಖಾ ಚಂದ್ರನ್, ಪ್ರೇಮ ವೇಲಾಯುದನ್, ಯಶೋಧ ಮತ್ತು ಶೈಲಜ ಸುರೇಶ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.
No comments:
Post a Comment