ಭದ್ರಾವತಿ, ನ. ೨೦: ನಾಲ್ವಡಿ ಕೃಷ್ಣರಾಜ ಒಡೆಯರ್ ಸಾರ್ವಜನಿಕ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಚಲನಚಿತ್ರ ನಟ, ಸಮಾಜ ಸೇವಕ, ಪವರ್ ಸ್ಟಾರ್ ಪುನೀತ್‌ರಾಜ್‌ಕುಮಾರ್‌ರವರ ಸ್ಮರಣಾರ್ಥ ನ.೨೧ರ ಭಾನುವಾರ ಬೆಳಿಗ್ಗೆ ೧೧ ಗಂಟೆಗೆ ನಗರದ ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್ ಬಳಿ ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ನೇತ್ರದಾನ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ನೇತ್ರದಾನ ಅಭಿಯಾನದ ಜೊತೆಗೆ ಪುನೀತ್‌ರಾಜ್‌ಕುಮಾರ್‌ರವರ ಅಭಿನಯದ ಚಲನಚಿತ್ರಗಳ ಸುಮಧುರ ಗೀತೆಗಳೊಂದಿಗೆ ಗೀತಾ ನಮನ, ಗಣ್ಯರಿಂದ ನುಡಿ ನಮನ ಹಾಗು ಪುಷ್ಪ ನಮನ ಕಾರ್ಯಕ್ರಮಗಳು ಜರುಗಲಿವೆ. ಮಧ್ಯಾಹ್ನ ೧.೩೦ಕ್ಕೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.
ಅಭಿಮಾನಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸಂಘದ ಸಂಸ್ಥಾಪಕ ಅಧ್ಯಕ್ಷ ಎಸ್.ಕೆ ಸುಧೀಂದ್ರ ಮನವಿ ಮಾಡಿದ್ದಾರೆ.
No comments:
Post a Comment