ಎಸ್.ಎಸ್ ಕೃಷ್ಣ
ಭದ್ರಾವತಿ, ನ. ೧೫: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಸಂಘಟಿತ ಕಾರ್ಮಿಕರ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ತಾಲೂಕಿನ ವೀರಾಪುರ ನಿವಾಸಿ ಎಸ್.ಎಸ್ ಕೃಷ್ಣ ನೇಮಕಗೊಂಡಿದ್ದಾರೆ.
ಅಸಂಘಟಿತ ಕಾರ್ಮಿಕರ ವಿಭಾಗದ ರಾಷ್ಟ್ರೀಯ ಅಧ್ಯಕ್ಷ ಅರಬಿಂದ್ ಸಿಂಗ್ ಹಾಗು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ರವರ ಅನುಮೋದನೆ ಮೇರೆಗೆ ಎಸ್.ಎಸ್ ಕೃಷ್ಣ ಅವರನ್ನು ರಾಜ್ಯ ಕಾರ್ಯದರ್ಶಿಯಾಗಿ ವಿಭಾಗದ ರಾಜ್ಯಾಧ್ಯಕ್ಷ ಜಿ.ಎಸ್ ಮಂಜುನಾಥ್ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
ಅಸಂಘಟಿತ ಕಾರ್ಮಿಕರನ್ನು ಸಂಘಟಿಸಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಪ್ರಾಮಾಣಿಕವಾಗಿ ಶ್ರಮಿಸುವಂತೆ ಆದೇಶ ಪತ್ರದಲ್ಲಿ ಜಿ.ಎಸ್ ಮಂಜುನಾಥ್ ಸೂಚಿಸಿದ್ದಾರೆ.
No comments:
Post a Comment