ಭದ್ರಾವತಿ ಬಿ.ಎಚ್ ರಸ್ತೆ ರೈಲ್ವೆ ನಿಲ್ದಾಣದ ಬಳಿ ಸರ್.ಎಂ ವಿಶ್ವೇಶ್ವರಾಯ ಪ್ರತಿಮೆ ಮುಂಭಾಗ ಹಮ್ಮಿಕೊಳ್ಳಲಾಗಿದ್ದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ಅಸಂಘಟಿತ ಕಾರ್ಮಿಕರ ೫ನೇ ವರ್ಷದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದ ನೇತೃತ್ವವಹಿಸಿ ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷ ಬಿ.ಎಸ್ ಅಭಿಲಾಷ್ ಮಾತನಾಡಿದರು.
ಭದ್ರಾವತಿ, ನ. ೧೬: ಅಸಂಘಟಿತ ಕಾರ್ಮಿಕರು ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷ ಬಿ.ಎಸ್ ಅಭಿಲಾಷ್ ಹೇಳಿದರು.
ಅವರು ಮಂಗಳವಾರ ನಗರದ ಬಿ.ಎಚ್ ರಸ್ತೆ ರೈಲ್ವೆ ನಿಲ್ದಾಣದ ಬಳಿ ಸರ್.ಎಂ ವಿಶ್ವೇಶ್ವರಾಯ ಪ್ರತಿಮೆ ಮುಂಭಾಗ ಹಮ್ಮಿಕೊಳ್ಳಲಾಗಿದ್ದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ಅಸಂಘಟಿತ ಕಾರ್ಮಿಕರ ೫ನೇ ವರ್ಷದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದ ನೇತೃತ್ವವಹಿಸಿ ಮಾತನಾಡಿದರು.
ಮನಮೋಹನ್ ಸಿಂಗ್ ಅವರು ದೇಶದ ಪ್ರಧಾನಿಯಾಗಿದ್ದಾಗ ಯುಪಿಎ ಸರ್ಕಾರದಲ್ಲಿ ಕಾರ್ಮಿಕ ಸಚಿವರಾಗಿದ್ದ ಮಲ್ಲಿಕಾರ್ಜುನ ಖರ್ಗೆಯವರು ಅಸಂಘಟಿತ ಕಾರ್ಮಿಕರಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತರುವ ಮೂಲಕ ಅವರ ಹಿತರಕ್ಷಣೆ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಆದರೆ ನಂತರ ಬಂದ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಕೇಂದ್ರ ಸರ್ಕಾರ ಅಸಂಘಟಿತ ಕಾರ್ಮಿಕರನ್ನು ಕಡೆಗಣಿಸಿದೆ. ಈ ಹಿನ್ನಲೆಯಲ್ಲಿ ಅಸಂಘಟಿತ ಕಾರ್ಮಿಕರ ರಕ್ಷಣೆಗಾಗಿ ಕಾಂಗ್ರೆಸ್ ನಿರಂತರವಾಗಿ ಹೋರಾಟ ನಡೆಸುತ್ತಿದೆ ಎಂದರು.
ಅಸಂಘಟಿತ ಕಾರ್ಮಿಕರ ವಿಭಾಗದ ನಗರ ಬ್ಲಾಕ್ ಅಧ್ಯಕ್ಷ ಕೆ. ಐಸಾಕ್ ಲಿಂಕನ್ ಮಾತನಾಡಿ, ಅಸಂಘಟಿತ ಕಾರ್ಮಿಕರು ಸೌಲಭ್ಯಗಳನ್ನು ಗುರುತಿನ ಚೀಟಿಗಳನ್ನು ಪಡೆದುಕೊಳ್ಳುವುದು ಕಡ್ಡಾಯವಾಗಿದೆ. ಅಸಂಘಟಿತ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಿಕೊಡುವ ನಿಟ್ಟಿನಲ್ಲಿ ನಿರಂತವಾಗಿ ಹೋರಾಟ ನಡೆಸಿಕೊಂಡು ಬರಲಾಗುತ್ತಿದೆ ಎಂದರು.
ಕರ್ನಾಟಕ ಸ್ಟೇಟ್ ಕನ್ಸ್‌ಸ್ಟ್ರಕ್ಷನ್ ವರ್ಕರ್ಸ್ ಯೂನಿಯನ್ ತಾಲೂಕು ಅಧ್ಯಕ್ಷ ಚಂದ್ರಶೇಖರ್, ನಗರಸಭಾ ಸದಸ್ಯರಾದ ಜಾರ್ಜ್, ಸೈಯ್ಯದ್ ರಿಯಾಜ್ ಹಾಗು ಅಸಂಘಟಿತ ಕಾರ್ಮಿಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment