ಭದ್ರಾವತಿ ಹಳೇನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಆಶ್ಲೇಷ ಬಲಿ ಪೂಜೆ ಶುಕ್ರವಾರ ವಿಜೃಂಭಣೆಯಿಂದ ಜರುಗಿತು.
ಭದ್ರಾವತಿ, ನ. ೨೬: ಹಳೇನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಆಶ್ಲೇಷ ಬಲಿ ಪೂಜೆ ಶುಕ್ರವಾರ ವಿಜೃಂಭಣೆಯಿಂದ ಜರುಗಿತು.
ಪ್ರಧಾನ ಅರ್ಚಕ ಪ್ರಮೋದ್‌ಕುಮಾರ್ ನೇತೃತ್ವದಲ್ಲಿ ಆಶ್ಲೇಷ ಬಲಿ ಪೂಜೆ ಆಚರಣೆಗಳೊಂದಿಗೆ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಜರುಗಿದವು.
ಶ್ರೀ ಗುರುರಾಜ ಸೇವಾ ಸಮಿತಿ ಅಧ್ಯಕ್ಷರಾದ ಮುರುಳಿಧರ, ನಿರಂಜನ ಆಚಾರ್, ಪ್ರಧಾನ ಕಾರ್ಯದರ್ಶಿ ರಮಾಕಾಂತ್, ಉಪಾಧ್ಯಕ್ಷೆ ಉಮಾ ರಾಘವೇಂದ್ರ ತಂತ್ರಿ, ಸುಜಾತ ರಮಾಕಾಂತ್, ಯುವ ಮುಖಂಡ ಬಿ.ಎಸ್ ಗಣೇಶ್ ಸೇರಿದಂತೆ ಭಕ್ತಾಧಿಗಳು ಪಾಲ್ಗೊಂಡಿದ್ದರು.
No comments:
Post a Comment