ಭದ್ರಾವತಿ, ಡಿ. 4: ಅಮಲೋದ್ಭವಿ ಮಾತೆಯ ದೇವಾಲಯ ಹಾಗೂ ಉಜ್ಜನಿಪುರ ನಗರ ಆರೋಗ್ಯ ಕೇಂದ್ರ ವತಿಯಿಂದ ಡಿ.5 ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ಕೋವಿಡ್ ಲಸಿಕೆ ನೀಡುವ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ನ್ಯೂಟೌನ್ ಅಮಲೋದ್ಭವಿ ಮಾತೆಯ ದೇವಾಲಯದ ಆವರಣದಲ್ಲಿ ನಡೆಯಲಿರುವ ಅಭಿಯಾನದಲ್ಲಿ ಇದುವರೆಗೂ ಲಸಿಕೆ ಪಡೆಯದವರು ಹಾಗೂ ಮೊದಲನೇ ಡೋಸ್ ಪಡೆದರು ಪಾಲ್ಗೊಳ್ಳಬಹುದಾಗಿದೆ.
ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಎರಡೂ ಬಗೆಯ ಲಸಿಕೆಗಳನ್ನು ನೀಡಲಾಗುವುದು ಇದರ ಸದುಪಯೋಗ ಪಡೆದುಕೊಳ್ಳುವಂತೆ ಅಮಲೋದ್ಭವಿ ಮಾತೆಯ ದೇವಾಲಯದ ಧರ್ಮಗುರು ಫಾದರ್ ಲಾನ್ಸಿ ಡಿಸೋಜಾ ಮತ್ತು ಪಾಲನಾ ಪರಿಷತ್ ಕಾರ್ಯದರ್ಶಿ ಅಂತೋಣಿ ವಿಲ್ಸನ್ ಕೋರಿದ್ದಾರೆ .
No comments:
Post a Comment