ಭದ್ರಾವತಿ ತಾಲೂಕಿನ ಹಾತಿಕಟ್ಟೆ ಗ್ರಾಮದ ಶ್ರೀ ಅಂತರಘಟ್ಟಮ್ಮ ದೇವಿ ಹಾಗೂ ಶ್ರೀ ಚೌಡೇಶ್ವರಿ ದೇವಿ ಪ್ರತಿಷ್ಠಾಪನೆ ಹಾಗು ಗೋಪುರ ಕಳಸಾರೋಹಣ ಮಂಗಳವಾರ ವಿಜೃಂಭಣೆಯಿಂದ ಜರುಗಿತು. ಈ ಸಂದರ್ಭದಲ್ಲಿ ಬಿಳಿಕಿ ಶ್ರೀಗಳಿಗೆ ಗೌರವ ಸಮರ್ಪಣೆ ಸಲ್ಲಿಸಲಾಯಿತು.
ಭದ್ರಾವತಿ, ಡಿ. ೨೧: ತಾಲೂಕಿನ ಹಾತಿಕಟ್ಟೆ ಗ್ರಾಮದ ಶ್ರೀ ಅಂತರಘಟ್ಟಮ್ಮ ದೇವಿ ಹಾಗೂ ಶ್ರೀ ಚೌಡೇಶ್ವರಿ ದೇವಿ ಪ್ರತಿಷ್ಠಾಪನೆ ಹಾಗು ಗೋಪುರ ಕಳಸಾರೋಹಣ ಮಂಗಳವಾರ ವಿಜೃಂಭಣೆಯಿಂದ ಜರುಗಿತು.
ಧಾರ್ಮಿಕ ಕಾರ್ಯಕ್ರಮದ ದಿವ್ಯ ಸಾನಿಧ್ಯ ಬಿಳಿಕಿ ಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಿದ್ದರು. ಉದ್ಯಮಿ ಬಿ.ಕೆ ಶಿವಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಬಿಜೆಪಿ ಮುಖಂಡ ಸಂಜಯ್ ಹಾಗು ದೇವಸ್ಥಾನ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಗ್ರಾಮದ ಮುಖಂಡರು ಮತ್ತು ಹಾತಿಕಟ್ಟೆ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಗ್ರಾಮಸ್ಥರು, ಭಕ್ತಾಧಿಗಳು ಪಾಲ್ಗೊಂಡಿದ್ದರು.
No comments:
Post a Comment