ಭದ್ರಾವತಿ, ಡಿ. ೧: ಮೆಸ್ಕಾಂ ಕೂಡ್ಲಿಗೆರೆ ೬೬/೧೧ ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿ ಕೊಂಡಿರುವುದರಿಂದ ನ.೨ರಂದು ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೬ ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಬದನೆಹಾಳು, ಬೆಳ್ಳಿಗೆರೆ, ಬಂಡಿಗುಡ್ಡ, ಹೊಸಹಳ್ಳಿ, ಕಲ್ಪನಹಳ್ಳಿ, ಕೂಡ್ಲಿಗೆರೆ, ಅರಳಿಹಳ್ಳಿ, ಗುಡ್ಡದ ನೇರಲಕೆರೆ, ಕಲ್ಲಾಪುರ, ದಾನವಾಡಿ, ಡಿ.ಬಿ ಹಳ್ಳಿ, ಅರಕೆರೆ, ಮಾರಶೆಟ್ಟಿಹಳ್ಳಿ, ಕಲ್ಲಿಹಾಳ್, ಅರಬಿಳಚಿ ತಿಮ್ಲಾಪುರ ಸೇರಿದಂತೆ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸುವಂತೆ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.
No comments:
Post a Comment