ಭದ್ರಾವತಿಯಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಸಿದ್ದಾರ್ಥ ಅಂಧರ ಕೇಂದ್ರದ ಅಧ್ಯಕ್ಷ ಶಿವಬಸಪ್ಪ ಮಾತನಾಡಿದರು.
ಭದ್ರಾವತಿ, ಡಿ. ೨೨: ನಗರದ ನ್ಯೂಟೌನ್ ಸಿದ್ದಾರ್ಥ ಟ್ರಸ್ಟ್‌ನ ಸಿದ್ದಾರ್ಥ ಅಂಧರ ಕೇಂದ್ರ ವತಿಯಿಂದ ವತಿಯಿಂದ ಬೆಂಗಳೂರಿನ ಶೇಖರ್‌ನಾಯ್ಕ್ ಫೌಂಡೇಷನ್ ಸಹಯೋಗದೊಂದಿಗೆ ಕ್ರಿಕೆಟ್ ತರಬೇತಿ ಶಿಬಿರ ಹಾಗೂ ರಾಜ್ಯಮಟ್ಟದ ತ್ರಿಕೋನ ಅಂಧರ ಕ್ರಿಕೆಟ್ ಪಂದ್ಯಾವಳಿ ಹಮ್ಮಿಕೊಳ್ಳಲಾಗಿದೆ ಎಂದು ಸಿದ್ದಾರ್ಥ ಅಂಧರ ಕೇಂದ್ರದ ಅಧ್ಯಕ್ಷ ಶಿವಬಸಪ್ಪ ಹೇಳಿದರು.
ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನ್ಯೂಟೌನ್ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ಡಿ.೨೪ ಮತ್ತು ೨೫ರಂದು ಎರಡು ದಿನ ಕ್ರಿಕೆಟ್ ತರಬೇತಿ ಶಿಬಿರ ಹಾಗು ೨೬ರಂದು ರಾಜ್ಯಮಟ್ಟದ ತ್ರಿಕೋನ ಅಂಧರ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ.
ಶಿಬಿರವನ್ನು ಡಿ.೨೪ರ ಬೆಳಿಗ್ಗೆ ೯.೩೦ಕ್ಕೆ ಶಾಸಕ ಬಿ.ಕೆ ಸಂಗಮಮೇಶ್ವರ್ ಉದ್ಘಾಟಿಸಲಿದ್ದು, ರಾಷ್ಟ್ರೀಯ ಅಂಧರ ಕ್ರಿಕೆಟ್ ಭಾರತ ತಂಡದ ಮಾಜಿ ನಾಯಕ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶೇಖರ್‌ನಾಯ್ಕ್, ಎಸ್‌ಎಲ್‌ಎನ್ ಡೇ ಕೇರ್ ಮತ್ತು ಡಯಗ್ನೋಸ್ಟಿಕ್ ಡಾ. ಸುಶಿತ್ ಶೆಟ್ಟಿ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ರಮೇಶ್ ಮತ್ತು ಉದ್ಯಮಿ ಎ. ಮಾದಣ್ಣ, ಆರ್. ಬಾಲಾಜಿ, ಎಂ. ಶಿವಕುಮಾರ್, ಶ್ರೀನಿವಾಸ್ ಪೂಜಾರಿ ಮತ್ತು ಮೈಕೆಲ್ ಹಾಗು ಬಾಬು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು, ಡಿ.೨೬ರಂದು ರಾಜ್ಯಮಟ್ಟದ ತ್ರಿಕೋನ ಅಂಧರ ಕ್ರಿಕೆಟ್ ಪಂದ್ಯಾವಳಿಯನ್ನು ಪೊಲೀಸ್ ಉಪಾಧೀಕ್ಷಕ ಜೀತೇಂದ್ರ ಕುಮಾರ್ ದಯಾಮ ಉದ್ಘಾಟಿಸಲಿದ್ದು, ತಹಸೀಲ್ದಾರ್ ಆರ್. ಪ್ರದೀಪ್ ಮತ್ತು ಚಿಕ್ಕಮಗಳೂರು ನಗರ ಯೋಜನಾ ನಿರ್ದೇಶಕ ಮನೋಹರ್ ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದರು.
ವಿಜೇತ ತಂಡಗಳಿಗೆ ಪ್ರಥಮ ಬಹುಮಾನ ರು.೧೦ ಸಾವಿರ ನಗದು, ಟ್ರೋಫಿ ಹಾಗು ಪ್ರಶಸ್ತಿ ಪತ್ರ, ದ್ವಿತೀಯ ಬಹುಮಾನ ರು.೮ ಸಾವಿರ ನಗದು, ಟ್ರೋಫಿ ಹಾಗು ಪ್ರಶಸ್ತಿ ಪತ್ರ, ತೃತೀಯ ಬಹುಮಾನ ರು.೬ ನಗದು, ಟ್ರೋಫಿ ಹಾಗು ಪ್ರಶಸ್ತಿ ಪತ್ರ ನೀಡಲಾಗುವುದು. ಬಹುಮಾನ ವಿತರಣೆ ಸಮಾರಂಭದಲ್ಲಿ ವಿಐಎಸ್‌ಎಲ್ ಕಾರ್ಯಪಾಲಕ ನಿರ್ದೇಶಕ ಸುರಜಿತ್ ಮಿಶ್ರಾ, ನಗರಸಭೆ ಪೌರಾಯುಕ್ತ ಕೆ. ಪರಮೇಶ್ ಮತ್ತು ಸೂಡಾ ಸದಸ್ಯ ರಾಮಲಿಂಗಯ್ಯ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ ಎಂದರು.
ಸೃಷ್ಠಿ, ಭಾಗ್ಯಶ್ರೀ, ಮಾರುತಿ, ನಾಗರತ್ನ, ರಂಜನ್ ಸೇರಿದಂತೆ ಇನ್ನಿತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
No comments:
Post a Comment