ಭದ್ರಾವತಿ, ಡಿ. ೧೧: ಶಾಸಕ ಬಿ.ಕೆ ಸಂಗಮೇಶ್ವರ್ ಸಹಕಾರದೊಂದಿಗೆ ನಗರದ ಓಂ ಕ್ರಿಕೇಟರ್‍ಸ್ ವತಿಯಿಂದ ಯುವ ಮುಖಂಡ ಕೆ.ಪಿ ಗಿರೀಶ್ ನೇತೃತ್ವದಲ್ಲಿ ಡಿ.೧೭ ರಿಂದ ೧೯ರವರೆಗೆ ಮೊಟ್ಟ ಮೊದಲ ಬಾರಿಗೆ ರಾಜ್ಯಮಟ್ಟದ ಓಂ ಕಪ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಹಮ್ಮಿಕೊಳ್ಳಲಾಗಿದೆ.
ಪಂದ್ಯಾವಳಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ನಡೆಯಲಿದ್ದು, ಪ್ರವೇಶ ಶುಲ್ಕ ೧೫,೦೦೦ ರು. ನಿಗದಿಪಡಿಸಲಾಗಿದೆ. ವಿಜೇತ ತಂಡಗಳಿಗೆ ಮೊದಲ ಬಹುಮಾನ ೧,೫೦,೦೦೦ ರು. ನಗದು ಹಾಗು ಪಾರಿತೋಷಕ, ದ್ವಿತೀಯ ಬಹುಮಾನ ೭೫,೦೦೦ ರು. ನಗದು ಹಾಗು ಪಾರಿತೋಷಕ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ಮೊ: ೯೮೮೦೧೦೦೯೬೨ ಸಂಖ್ಯೆಗೆ ಕರೆ ಮಾಡಬಹುದಾಗಿದೆ.
No comments:
Post a Comment