ನಗರಸಭೆ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
ಇತ್ತೀಚೆಗೆ ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿ ಸರ್ಕಾರಿ ಭೂಮಿ ಒತ್ತುವರಿ ಮಾಡಿ ಅನಧಿಕೃತ ಕಟ್ಟಡ ನಿರ್ಮಾಣ ಮಾಡಲಾಗುತ್ತಿದ್ದು, ಇದಕ್ಕೆ ಸಹಕರಿಸುತ್ತಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಶನಿವಾರ ಪ್ರಜಾ ವಿಮೋಚನಾ ಸಂಘ(ಬಿಪಿಎಲ್)ದ ವತಿಯಿಂದ ಶಾಸಕ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಯಿತು.
ಭದ್ರಾವತಿ, ಡಿ. ೧೮: ಇತ್ತೀಚೆಗೆ ನಗರಸಭೆ ವ್ಯಾಪ್ತಿಯಲ್ಲಿ ಸರ್ಕಾರಿ ಭೂಮಿ ಒತ್ತುವರಿ ಮಾಡಿ ಅನಧಿಕೃತ ಕಟ್ಟಡ ನಿರ್ಮಾಣ ಮಾಡಲಾಗುತ್ತಿದ್ದು, ಇದಕ್ಕೆ ಸಹಕರಿಸುತ್ತಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಶನಿವಾರ ಪ್ರಜಾ ವಿಮೋಚನಾ ಸಂಘ(ಬಿಪಿಎಲ್)ದ ವತಿಯಿಂದ ಶಾಸಕ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಯಿತು.
ಸರ್ಕಾರಿ ಜಾಗ ಮತ್ತು ಕೆರೆಗಳನ್ನು ಒತ್ತುವರಿ ಮಾಡಿ ಅನಧಿಕೃತ ಬಡಾವಣೆಗಳನ್ನು ರೂಪಿಸಿ ನಿವೇಶನಗಳನ್ನು ನಿರ್ಮಿಸಲಾಗುತ್ತಿದೆ. ಈ ಸಂಬಂಧ ಹಲವಾರು ಬಾರಿ ನಗರಸಭೆಗೆ ವಿವಿಧ ಸಂಘಟನೆಗು ದೂರು ನೀಡಿವೆ. ಆದರೂ ಸಹ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿನ್ನಲೆಯಲ್ಲಿ ನಗರಸಭೆ ಪೌರಾಯುಕ್ತರು, ಕಂದಾಯಾಧಿಕಾರಿಗಳು, ಸಹಾಯಕ ಕಾರ್ಯಪಾಲಕ ಅಭಿಯಂತರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಗೆ ಸ್ಪಂದಿಸಿದ ಶಾಸಕ ಬಿ.ಕೆ ಸಂಗಮೇಶ್ವರ್ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಸಂಘದ ಅಧ್ಯಕ್ಷ ಬಿ. ಜಗದೀಶ್ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ಸುರೇಶ್, ಶ್ಯಾಮ್, ಮುರಳಿ ಕೃಷ್ಣ, ಎಂ. ರವಿಕುಮಾರ್, ಅಜಂತ್‌ಕುಮಾರ್, ಗೋವಿಂದ, ಸಂಪತ್‌ಕುಮಾರ್, ರವೀಂದ್ರಪ್ಪ, ಜ್ಯೋತಿ ಪ್ರಕಾಶ್, ಕೆ.ಸಿ ಯುವರಾಜ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment