ಭದ್ರಾವತಿ ಹಳೇನಗರದ ನಿರ್ಮಲ ಆಸ್ಪತ್ರೆ ೨೪ ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಆಸ್ಪತ್ರೆಯನ್ನು ಸೀಲ್‌ಡೌನ್ ಮಾಡಿರುವುದು.
ಭದ್ರಾವತಿ, ಡಿ. ೯: ಶಿವಮೊಗ್ಗ ನಂಜಪ್ಪ ಲೈಫ್‌ಕೇರ್ ಆಸ್ಪತ್ರೆಯಲ್ಲಿ ಪರೀಕ್ಷೆ ಬರೆದ ಹಳೇನಗರದ ನಿರ್ಮಲ ಆಸ್ಪತ್ರೆಯ ೨೪ ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, ಇದರಿಂದಾಗಿ ಗುರುವಾರ ಆಸ್ಪತ್ರೆಯನ್ನು ಸೀಲ್‌ಡೌನ್ ಮಾಡಲಾಗಿದೆ.
ಪರೀಕ್ಷೆಗೆ ತೆರಳಿದ್ದ ವಿದ್ಯಾರ್ಥಿಗಳ ಪೈಕಿ ಓರ್ವ ವಿದ್ಯಾರ್ಥಿಯಲ್ಲಿ ಸೋಂಕು ಪತ್ತೆಯಾಗಿದ್ದು, ಈ ಹಿನ್ನಲೆಯಲ್ಲಿ ತಾಲೂಕು ಆರೋಗ್ಯ ಇಲಾಖೆ ವತಿಯಿಂದ ನರ್ಸಿಂಗ್ ವ್ಯಾಸಂಗ ನಡೆಸುತ್ತಿರುವ ಎಲ್ಲಾ ಒಟ್ಟು ೧೭೯ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಿದಾಗ ೨೫ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ವಿದ್ಯಾರ್ಥಿಗಳು ಹೊರಗೆ ಎಲ್ಲೂ ಸಹ ಹೋಗಿಲ್ಲ. ಆದರೂ ಸಹ ಸೋಂಕು ಪತ್ತೆಯಾಗಿದ್ದು, ಈ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರದಿಂದಲೇ ಸೋಂಕು ಹರಡಿರುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗಿದೆ.
ಮುನ್ನಚ್ಚರಿಕೆ ಕ್ರಮವಾಗಿ ಆಸ್ಪತ್ರೆಯನ್ನು ಸೀಲ್‌ಡೌನ್ ಮಾಡಲಾಗಿದ್ದು, ಆಸ್ಪತ್ರೆಯನ್ನು ಸಂಪೂರ್ಣವಾಗಿ ಸ್ಯಾನಿಟೈಜರ್ ಮಾಡಲಾಗಿದೆ. ಅಲ್ಲದೆ ಆಸ್ಪತ್ರೆಗೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿದ್ದು, ಮುಖ್ಯದ್ವಾರವನ್ನು ಟೇಪ್ ಮಾಡುವ ಮೂಲಕ ಬಂದ್ ಮಾಡಲಾಗಿದೆ.
ಆಸ್ಪತ್ರೆಯಲ್ಲಿ ಈ ಹಿಂದೆ ಕೊರೋನಾ ಸೋಂಕಿತರಿಗೂ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಸಂದರ್ಭದಲ್ಲಿ ಹೆಚ್ಚಿನ ಕಟ್ಟುನಿಟ್ಟಿನ ಎಚ್ಚರಿಕೆ ಕ್ರಮಗಳನ್ನು ಅನುಸರಿಸಲಾಗುತ್ತಿತ್ತು. ಇದರಿಂದ ಯಾವುದೇ ಸೋಂಕು ಪ್ರಕರಣಗಳು ಆಸ್ಪತ್ರೆಯಲ್ಲಿ ಕಂಡು ಬಂದಿರಲಿಲ್ಲ.
No comments:
Post a Comment