ಗೌರಮ್ಮ ಎಸ್. ಮಹಾದೇವ
ಭದ್ರಾವತಿ, ಡಿ. ೨೭: ತಾಲೂಕು ಸುಗ್ರಾಮ ಚುನಾಯಿತ ಗ್ರಾಮ ಪಂಚಾಯಿತಿ ಮಹಿಳಾ ಸದಸ್ಯರ ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಗೌರಮ್ಮ ಎಸ್. ಮಹಾದೇವ ಅವರನ್ನು ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಸದಸ್ಯರು ಅಭಿನಂದಿಸಿದ್ದಾರೆ.
ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಸದಸ್ಯರಾಗಿರುವ ಗೌರಮ್ಮ ಅವರು ಅಧ್ಯಕ್ಷರಾಗಿವುದು ಪಂಚಾಯಿತಿಗೆ ಹೆಮ್ಮೆಯ ವಿಚಾರವಾಗಿದ್ದು, ತಾಲೂಕಿನಾದ್ಯಂತ ಮಹಿಳಾ ಸದಸ್ಯರಿಗೆ ಗ್ರಾಮ ಪಂಚಾಯಿತಿ ಆಡಳಿತದ ಪರಿಕಲ್ಪನೆ ಕುರಿತು ಇನ್ನೂ ಹೆಚ್ಚಿನ ಮಾಹಿತಿ ಒದಗಿಸುವ ಜೊತೆಗೆ ಪಂಚಾಯಿತಿ ಆಡಳಿತ ಪರಿಣಾಮಕಾರಿಯಾಗಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸುವಂತೆ ಮನವಿ ಮಾಡಿದ್ದಾರೆ.
ಗೌರಮ್ಮ ಅವರಿಗೆ ಬ್ಲಾಕ್ ಕಾಂಗ್ರೆಸ್ ಸಮಿತಿ ಎಸ್.ಟಿ ಘಟಕದ ತಾಲೂಕು ಅಧ್ಯಕ್ಷ ಎಸ್. ಮಹಾದೇವ ಹಾಗು ಮೇದಾರ ಸಮಾಜದ ಪ್ರಮುಖರು ಸೇರಿದಂತೆ ಇನ್ನಿತರರು ಸಹ ಅಭಿನಂದಿಸಿದ್ದಾರೆ.
No comments:
Post a Comment