ರಾಜ್ಯದಲ್ಲಿರುವ ಪಡಿತರ ನ್ಯಾಯಬೆಲೆ ಅಂಗಡಿಗಳ ಸಮಸ್ಯೆ ಕುರಿತು ಸರ್ಕಾರಿ ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷ ಟಿ. ಕೃಷ್ಣಪ್ಪ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಯಿತು.
ಭದ್ರಾವತಿ, ಡಿ. ೩: ರಾಜ್ಯದಲ್ಲಿರುವ ಪಡಿತರ ನ್ಯಾಯಬೆಲೆ ಅಂಗಡಿಗಳ ಸಮಸ್ಯೆ ಕುರಿತು ಸರ್ಕಾರಿ ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷ ಟಿ. ಕೃಷ್ಣಪ್ಪ ನೇತೃತ್ವದಲ್ಲಿ ಚರ್ಚಿಸಲಾಯಿತು.
ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ತುರ್ತು ಸಭೆಯಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್ ಸಮಸ್ಯೆ, ಕೆವೈಸಿಹಾಗು ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಮೀಷನ್ ವಿಚಾರಗಳ ಕುರಿತು ಚರ್ಚಿಸಲಾಯಿತು.
ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಮೀಷನ್ ಈಗಾಗಲೇ ಬಿಡುಗಡೆಗೊಂಡಿದ್ದು, ಆದರೂ ಸಹ ಇದುವರೆಗೂ ಖಾತೆಗಳಿಗೆ ಜಮಾ ಆಗಿಲ್ಲ. ತಕ್ಷಣ ಕ್ರಮ ಕೈಗೊಳ್ಳುವಂತೆ ಆಹಾರ ಇಲಾಖೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ರಾಜ್ಯ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
No comments:
Post a Comment