ಭದ್ರಾವತಿ ನ್ಯೂಟೌನ್ ದಯಾಸಾಗರ್ ಟ್ರಸ್ಟ್ ವತಿಯಿಂದ ಶನಿವಾರ ಟ್ರಸ್ಟ್ ಸಂಸ್ಥಾಪಕ ಎ. ರೋಸಯ್ಯ ಮತ್ತು ಚಲನಚಿತ್ರ ನಟ ಪುನೀತ್ ರಾಜ್‌ಕುಮಾರ್‌ರವರ ಪುಣ್ಯಸ್ಮರಣೆ ಹಮ್ಮಿಕೊಳ್ಳಲಾಗಿತ್ತು.
ಭದ್ರಾವತಿ, ಡಿ. ೧೮: ನ್ಯೂಟೌನ್ ದಯಾಸಾಗರ್ ಟ್ರಸ್ಟ್ ವತಿಯಿಂದ ಶನಿವಾರ ಟ್ರಸ್ಟ್ ಸಂಸ್ಥಾಪಕ ಎ. ರೋಸಯ್ಯ ಮತ್ತು ಚಲನಚಿತ್ರ ನಟ ಪುನೀತ್ ರಾಜ್‌ಕುಮಾರ್‌ರವರ ಪುಣ್ಯಸ್ಮರಣೆ ಹಮ್ಮಿಕೊಳ್ಳಲಾಗಿತ್ತು.
ಸಭೆಯಲ್ಲಿ ರೆವರೆಂಡ್ ಸ್ಟ್ಯಾನ್ಲಿ ಕ್ರಿಸ್‌ಮಸ್ ಸಂದೇಶ ವಾಚಿಸಿದರು. ಕಾರ್ಯದರ್ಶಿ ಬಿ. ಪ್ರಸಾದ್ ಟ್ರಸ್ಟ್ ಕಾರ್ಯಚಟುವಟಿಕೆಗಳ ಕುರಿತು ವಿವರಿಸಿದರು. ಸೇವಾಕರ್ತರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಸಿದ್ದಾರ್ಥ ಅಂಧರ ಕೇಂದ್ರ ವಿಕಲಚೇತನ ಹಾಗು ಅಬಲ ಆಶ್ರಮದ ಮಹಿಳೆಯರಿಗೆ ಸೀರೆ ಮತ್ತು ಟ್ರಸ್ಟ್ ಫಲಾನುಭವಿಗಳಿಗೆ ಟವಲ್ ವಿತರಿಸಲಾಯಿತು.
ಹಲವಾರು ವರ್ಷಗಳಿಂದ ದಯಾಸಾಗರ್ ಟ್ರಸ್ಟ್ ವತಿಯಿಂದ ದೀನ ದಲಿತರು, ನಿಗರ್ತಿಕರು, ಅಸಹಾಯಕರ ಹಸಿವು ನೀಗಿಸುವ ಕಾರ್ಯದ ಜೊತೆಗೆ ಇನ್ನಿತರ ಸೇವಾ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದ್ದು, ಸಮಾಜಕ್ಕೆ ಮಾದರಿಯಾಗಿದೆ.
ಟ್ರಸ್ ಅಧ್ಯಕ್ಷ ಆರ್. ಮೋಸಸ್ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಸದಸ್ಯರಾದ ಬಿ.ಕೆ ಮೋಹನ್, ಕಾಂತರಾಜ್, ರೆವರೆಂಡ್ ಬಾಬಿರಾಜ್, ಫಾಸ್ಟರ್ ರೈಮಂಡ್, ಯಂಗ್ ಕ್ರಿಶ್ಚಿಯನ್ ಅಸೋಸಿಯೇಷನ್ ಅಧ್ಯಕ್ಷ ಸೆಲ್ವರಾಜ್, ಸವಿತಾ ಸಮಾಜದ ಉಪಾಧ್ಯಕ್ಷ ಕೆ. ಗೋಪಾಲ ಕೃಷ್ಣ, ಟ್ರಸ್ಟ್ ಖಜಾಂಚಿ ಆರ್. ಪುಷ್ಪಲತಾ, ಸದಸ್ಯರಾದ ಮರಿಯಮ್ಮ, ಎಸ್.ಆರ್ ರೇಮಂಡ್, ವಿ. ವಿನೂತ, ಸಂತೋಷ್, ಎಸ್. ಜಾನಿ, ಡಿ. ಪ್ರೇಮ್‌ಕುಮಾರ್, ವಿಜಯ್‌ದಯಾಕರ್, ಕೆವಿನ್ ಸೋಲೋಮನ್, ಅನುಜೀವನ್ ಮತ್ತು ಕಾಂತಮ್ಮ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment