ಭದ್ರಾವತಿ, ಡಿ. ೬: ತಾಲೂಕಿನ ನಾಗತಿಬೆಳಗಲು ತಾಂಡವನ್ನು ಕಂದಾಯ ಗ್ರಾಮವೆಂದು ಪರಿಗಣಿಸಲು ಪ್ರಸ್ತಾವನೆ ಸಲ್ಲಿಸುವಂತೆ ತಾಲೂಕು ದಂಡಾಧಿಕಾರಿ ತಹಸೀಲ್ದಾರ್‌ಗೆ ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕ ಹಾಗು ಪದನಿಮಿತ್ತ ಭೂದಾಖಲೆಗಳ ಉಪನಿರ್ದೇಶಕರು ಸೂಚಿಸಿದ್ದಾರೆ.
ನಾಗತಿಬೆಳಗಲು ತಾಂಡದಲ್ಲಿ ಪರಿಶಿಷ್ಟ ಜಾತಿ ಲಂಬಾಣಿ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದು ಕಂದಾಯ ಗ್ರಾಮವೆಂದು ಪರಿಗಣಿಸುವಂತೆ ಕಂದಾಯ ಸಚಿವರಿಗೆ ಮನವಿ ಸಲ್ಲಿಕೆಯಾಗಿದ್ದು, ಈ ಹಿನ್ನಲೆಯಲ್ಲಿ ಸಚಿವರು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಸರ್ಕಾರಿ ಆದೇಶದಲ್ಲಿನ ಮಾನದಂಡಗಳ ಅನುಸಾರ ನಾಗತಿಬೆಳಗಲು ತಾಂಡವನ್ನು ಹೊಸ ಕಂದಾಯ ಗ್ರಾಮವನ್ನಾಗಿ ಪರಿವರ್ತಿಸಲು ಸಾಧ್ಯವಿದ್ದಲಿ, ತಕ್ಷಣ ಅಗತ್ಯ ದಾಖಲೆಗಳೊಂದಿಗೆ ಪ್ರಸ್ತಾವನೆ ಸಲ್ಲಿಸುವಂತೆ ಉಪನಿರ್ದೇಶಕರು ಸೂಚಿಸಿದ್ದಾರೆ.
No comments:
Post a Comment