ಭದ್ರಾವತಿ ನಗರಸಭೆ ಸ್ಥಾಯಿ ಸಮಿತಿ ನೂತನ ಅಧ್ಯಕ್ಷರಾಗಿ ೧೨ನೇ ವಾರ್ಡ್ ನಗರಸಭಾ ಸದಸ್ಯ ಕೆ. ಸುದೀಪ್ ಕುಮಾರ್ ಸೋಮವಾರ ಅಧಿಕಾರ ಸ್ವೀಕರಿಸಿದರು.
ಭದ್ರಾವತಿ, ಡಿ. ೨೭: ನಗರಸಭೆ ಸ್ಥಾಯಿ ಸಮಿತಿ ನೂತನ ಅಧ್ಯಕ್ಷರಾಗಿ ೧೨ನೇ ವಾರ್ಡ್ ನಗರಸಭಾ ಸದಸ್ಯ ಕೆ. ಸುದೀಪ್ ಕುಮಾರ್ ಸೋಮವಾರ ಅಧಿಕಾರ ಸ್ವೀಕರಿಸಿದರು.
ನಗರಸಭೆ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಸುದೀಪ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದು, ಚುನಾವಣಾಧಿಕಾರಿಯಾಗಿ ಪೌರಾಯುಕ್ತ ಕೆ. ಪರಮೇಶ್ ಕರ್ತವ್ಯ ನಿರ್ವಹಿಸಿದರು.
ವಿ.ಕದಿರೇಶ್, ಮಣಿ ಎಎನ್ ಎಸ್, ಬಷೀರ್ ಅಹ್ಮದ್, ಲತಾ ಚಂದ್ರಶೇಖರ್, ಶೃತಿ ವಸಂತ್, ಜಯಶೀಲ ಸುರೇಶ್, ಕೋಟೇಶ್ವರ ರಾವ್, ಸೈಯದ್ ರಿಯಾಜ್, ರೇಖಾ ಪ್ರಕಾಶ್ ಮತ್ತು ಉದಯ್ ಕುಮಾರ್ ನೂತನ ಸ್ಥಾಯಿ ಸಮಿತಿ ಸದಸ್ಯರಾಗಿ ಆಯ್ಕೆಯಾದರು.
ನೂತನ ಅಧ್ಯಕ್ಷರು ಮತ್ತು ಸದಸ್ಯರನ್ನು ನಗರಸಭೆ ಅಧ್ಯಕ್ಷೆ ಗೀತಾ ರಾಜ್ ಕುಮಾರ್ ಮತ್ತು ಉಪಾಧ್ಯಕ್ಷ ಚನ್ನಪ್ಪ ಅಭಿನಂದಿಸಿದರು.
No comments:
Post a Comment