ಜಯಕರ್ನಾಟಕ ಸಂಘಟನೆ ವತಿಯಿಂದ ತಹಸೀಲ್ದಾರ್‌ಗೆ ಮನವಿ
ಬೆಳಗಾವಿಯಲ್ಲಿ ಎಂ.ಇ.ಎಸ್ ಪುಂಡರ ಹಾವಳಿ ಮಿತಿ ಮೀರಿದ್ದು, ಸ್ವಾತಂತ್ರ್ಯ ಹೋರಾಟಗಾರ, ದೇಶಭಕ್ತ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯನ್ನು ಉರುಳಿಸಿ ಧ್ವಂಸಗೊಳಿಸಿರುವ ಪ್ರಕರಣದಲ್ಲಿ ಬಂಧಿತರಾಗಿರುವ ೨೭ ಮಂದಿ ಎಂ.ಇ.ಎಸ್ ಪುಂಡರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಹಾಗು ಈ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸಬೇಕೆಂದು ಆಗ್ರಹಿಸಿ ಬುಧವಾರ ಭದ್ರಾವತಿಯಲ್ಲಿ ಜಯಕರ್ನಾಟಕ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಭದ್ರಾವತಿ, ಡಿ. ೨೨: ಬೆಳಗಾವಿಯಲ್ಲಿ ಎಂ.ಇ.ಎಸ್ ಪುಂಡರ ಹಾವಳಿ ಮಿತಿ ಮೀರಿದ್ದು, ಸ್ವಾತಂತ್ರ್ಯ ಹೋರಾಟಗಾರ, ದೇಶಭಕ್ತ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯನ್ನು ಉರುಳಿಸಿ ಧ್ವಂಸಗೊಳಿಸಿರುವ ಪ್ರಕರಣದಲ್ಲಿ ಬಂಧಿತರಾಗಿರುವ ೨೭ ಮಂದಿ ಎಂ.ಇ.ಎಸ್ ಪುಂಡರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಹಾಗು ಈ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸಬೇಕೆಂದು ಆಗ್ರಹಿಸಿ ಬುಧವಾರ ಜಯ ಕರ್ನಾಟಕ ಸಂಘಟನೆ ವತಿಯಿಂದ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್ ಬಳಿ ಡಾ. ಬಾಬಾಸಾಹೇಬ್ ಅಂಬೇಡ್ಕರ್‌ರವರ ಪ್ರತಿಮೆಗೆ ಯುವ ಮುಖಂಡ ಬಿ.ಎಸ್ ಗಣೇಶ್ ಹಾಗು ಸಂಘಟನೆ ಜಿಲ್ಲಾಧ್ಯಕ್ಷ ಡಾ. ಜೆ.ಆರ್ ದೀಪಕ್ ಮತ್ತು ತಾಲೂಕು ಅಧ್ಯಕ್ಷ ಆರ್. ಅರುಣ್ ನೇತೃತ್ವದಲ್ಲಿ ಮಾಲಾರ್ಪಣೆ ಮಾಡಿದ ಕಾರ್ಯಕರ್ತರು ಎಂ.ಇ.ಎಸ್ ಪುಂಡರ ಪುಂಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ನೆಲ, ಜಲ, ಭಾಷೆಗಾಗಿ ಕನ್ನಡಿಗರು ಯಾವುದೇ ರೀತಿಯ ಹೋರಾಟಕ್ಕೂ ಸಿದ್ದರಿದ್ದು, ರಾಜ್ಯದಲ್ಲಿ ಎಂ.ಇ.ಎಸ್ ಪುಂಡರು ಪೊಲೀಸ್ ವಾಹನಗಳಿಗೆ ಬೆಂಕಿ ಇಡುವ ಜೊತೆಗೆ ಸರ್ಕಾರ ವಾಹನಗಳ ಮೇಲೆ ಮನಸೋ ಇಚ್ಛೆ ಕಲ್ಲು ತೂರಾಟ ನಡೆಸಿ ದೇಶಭಕ್ತ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯನ್ನು ಧ್ವಂಸಗೊಳಿಸಿರುವುದು ಕನ್ನಡಿಗರಿಗೆ ಹಾಗು ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡಿರುವ ಅಪಮಾನವಾಗಿದೆ. ಈ ಹಿನ್ನಲೆ ಸರ್ಕಾರ ತಕ್ಷಣ ಎಂ.ಇ.ಎಸ್ ಪುಂಡರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ನಂತರ ತಾಲೂಕು ಕಛೇರಿ ಮಿನಿವಿಧಾನಸೌಧದವರೆಗೂ ಬೈಕ್ ರ್‍ಯಾಲಿ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು. ಜಿಲ್ಲಾ ಕಾರ್ಯಾಧ್ಯಕ್ಷ ಅಬ್ದುಲ್ ರಹೀಮ್, ತಾಲೂಕು ಗೌರವಾಧ್ಯಕ್ಷ ಪಿ. ಶರವಣ, ತಾಲೂಕು ಉಸ್ತುವಾರಿ ದಿವ್ಯರಾಜ್, ಶಂಕರಘಟ್ಟ ಘಟಕದ ಅಧ್ಯಕ್ಷ ಡಿ.ಟಿ ಶಶಿಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ಆರ್. ವರಲಕ್ಷ್ಮಿ, ಆಟೋ ಶಂಕರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment