ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್ ವಿಶ್ವನಗರದಲ್ಲಿ ಗ್ರಾಮಸ್ಥರ ಸಹಕಾರದೊಂದಿಗೆ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ಭದ್ರಾವತಿ, ಡಿ. ೩: ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ತಾಲೂಕಿನ ಅರಬಿಳಚಿ ಕ್ಯಾಂಪ್ ವಿಶ್ವನಗರದಲ್ಲಿ ಗ್ರಾಮಸ್ಥರ ಸಹಕಾರದೊಂದಿಗೆ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ಸಾಹಿತಿ ಜೆ.ಎನ್ ಬಸವರಾಜಪ್ಪ ಮಾತನಾಡಿ, ಕರ್ನಾಟಕದ ಇತಿಹಾಸದಲ್ಲಿ ಶಿವಮೊಗ್ಗ ಜಿಲ್ಲೆಯ ವೈಶಿಷ್ಟತೆಗಳನ್ನು, ಕೊಡುಗೆಗಳನ್ನುವಿವರಿಸಿದರು.
ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಎಂ. ಪರಮೇಶ್ ಮಾತನಾಡಿ, ನಾವೆಲ್ಲರೂ ಜಾತಿ, ಬೇಧಭಾವವಿಲ್ಲದೆ ಒಗ್ಗಟ್ಟಾಗಿ ಕನ್ನಡ ನಾಡು-ನುಡಿ ಕಟ್ಟಿ ಬೆಳೆಸುವ ಕಾರ್ಯದಲ್ಲಿ ಮುನ್ನಡೆಯೋಣ ಎಂದು ಕರೆ ನೀಡಿದರು.
ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಅಣ್ಣಾಮಲೈ, ಕರವೇ ಜಿಲ್ಲಾಧ್ಯಕ್ಷ ಪಿ. ಪ್ರಶಾಂತ್, ತಾಲೂಕು ಕಾರ್ಯದರ್ಶಿ ಅಶೋಕ ಘೋರ್ಪಡೆ, ಸಂಘಟನಾ ಕಾರ್ಯದರ್ಶಿ ರಾಮಕೃಷ್ಣ, ಘಟಕ ಉಪಾಧ್ಯಕ್ಷ ಗೋಪಿನಾಥ್, ವಿಶ್ವ ನಗರ ಘಟಕದ ಅಧ್ಯಕ್ಷ ಪ್ರವೀಣ್ ಹಾಗೂ ಉಪಾಧ್ಯಕ್ಷರು, ಕಾರ್ಯದರ್ಶಿ, ಸದಸ್ಯರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು. ಡಿಎಸ್‌ಎಸ್ ಮುಖಂಡ ಪಳನಿರಾಜ್ ನಿರೂಪಿಸಿದರು.
No comments:
Post a Comment