ಸಾಮಾಜಿಕ ಕಳಕಳಿಯ ಅಪರೂಪದ ವ್ಯಕ್ತಿತ್ವ ಹೊಂದಿದ್ದ ಚಲನಚಿತ್ರ ನಟ ಪುನೀತ್ ರಾಜ್‌ಕುಮಾರ್‌ರವರ ಸ್ಮರಣಾರ್ಥ ಭದ್ರಾವತಿಯಲ್ಲಿ ಹೊಸ ಸೇತುವೆ ರಸ್ತೆಗೆ ಪುನೀತ್ ರಾಜ್‌ಕುಮಾರ್ ಹೆಸರು ನಾಮಕರಣಗೊಳಿಸುವಂತೆ ಒತ್ತಾಯಿಸಿ ಶ್ರೀ ನಾರಾಯಣ ಗುರು ವಿಚಾರ ವೇದಿಕೆ ವತಿಯಿಂದ ಬುಧವಾರ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಡಿ. ೧: ಸಾಮಾಜಿಕ ಕಳಕಳಿಯ ಅಪರೂಪದ ವ್ಯಕ್ತಿತ್ವ ಹೊಂದಿದ್ದ ಚಲನಚಿತ್ರ ನಟ ಪುನೀತ್ ರಾಜ್‌ಕುಮಾರ್‌ರವರ ಸ್ಮರಣಾರ್ಥ ನಗರದ ಹೊಸ ಸೇತುವೆ ರಸ್ತೆಗೆ ಪುನೀತ್ ರಾಜ್‌ಕುಮಾರ್ ಹೆಸರು ನಾಮಕರಣಗೊಳಿಸುವಂತೆ ಒತ್ತಾಯಿಸಿ ಶ್ರೀ ನಾರಾಯಣ ಗುರು ವಿಚಾರ ವೇದಿಕೆ ವತಿಯಿಂದ ಬುಧವಾರ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಮನವಿ ಸಲ್ಲಿಸಲಾಯಿತು.
ಈಗಾಗಲೇ ವೇದಿಕೆ ವತಿಯಿಂದ ಪುನೀತ್ ರಾಜ್‌ಕುಮಾರ್ ಹೆಸರು ನಾಮಕರಣಗೊಳಿಸುವಂತೆ ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ ಹಾಗು ಪೌರಾಯುಕ್ತ ಕೆ. ಪರಮೇಶ್ ಅವರಿಗೂ ಮನವಿ ಸಲ್ಲಿಸಿ ಒತ್ತಾಯಿಸಲಾಗಿದೆ. ಇದೀಗ ಶಾಸಕರಿಗೂ ಮನವಿ ಸಲ್ಲಿಸಿದ್ದು, ಪುನೀತ್ ರಾಜ್‌ಕುಮಾರ್ ಹೆಸರು ಅಜರಾಮರವಾಗಿಸಲು ಹೊಸ ಸೇತುವೆ ರಸ್ತೆಗೆ ಅವರ ಹೆಸರನ್ನು ನಾಮಕರಣಗೊಳಿಸಲು ಮನವಿ ಮಾಡಲಾಗಿದೆ.
ವೇದಿಕೆ ಅಧ್ಯಕ್ಷ ನಟರಾಜ್, ಗೌರವಾಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ, ಪ್ರಮುಖರಾದ ಲೋಕನಾಥ್, ವಸಂತ್ ಪೂಜಾರಿ, ಕಾರ್ಯದರ್ಶಿ ಶರವಣ ಹಾಗೂ ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment