ಬಿ.ಕೆ ಸಂಗಮೇಶ್ವರ್
ಭದ್ರಾವತಿ, ಡಿ. ೧೯: ಕಳೆದ ೨-೩ ವಿಧಾನಸಭೆ ಅಧಿವೇಶನದಲ್ಲಿ ಒಂದಿಲ್ಲೊಂದು ಕಾರಣದಿಂದ ರಾಜ್ಯದ ಗಮನ ಸೆಳೆದಿದ್ದ ಶಾಸಕ ಬಿ.ಕೆ ಸಂಗಮೇಶ್ವರ್ ಈ ಬಾರಿ ಬೆಳಗಾವಿ ಅಧಿವೇಶನದಲ್ಲಿ ತಡವಾಗಿ ಪಾಲ್ಗೊಳ್ಳುತ್ತಿದ್ದಾರೆ.
ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಶಾಸಕರು ಈ ಬಾರಿ ಬೆಳಗಾವಿ ಅಧಿವೇಶನದಿಂದ ದೂರ ಉಳಿಯುವ ಲಕ್ಷಣಗಳು ಕಂಡು ಬರುತ್ತಿದ್ದವು. ಈ ನಡುವೆ ಶಾಸಕರು ಪತ್ರಿಕೆಗೆ ಮಾಹಿತಿ ನೀಡಿ ಸೋಮವಾರದಿಂದ ಅಧಿವೇಶನದಲ್ಲಿ ಪಾಲ್ಗೊಳ್ಳುವುದಾಗಿ ಸ್ಪಷ್ಟಪಡಿಸಿದರು.
ಈ ನಡುವೆ ವಿಧಾನಪರಿಷತ್ ಚುನಾವಣೆ ಎದುರಾದ ಹಿನ್ನಲೆಯಲ್ಲಿ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು ಬಾಕಿ ಉಳಿದಿದ್ದು, ಬೆಳಗಾವಿ ಅಧಿವೇಶನದಲ್ಲಿ ಇವುಗಳ ಕುರಿತು ಚರ್ಚಿಸಲಿದ್ದಾರೆ ಎನ್ನಲಾಗಿದೆ.
No comments:
Post a Comment