ಭದ್ರಾವತಿ ಹಳೇನಗರದ ಶ್ರೀ ರಾಮೇಶ್ವರ-ಶ್ರೀ ಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಶ್ರೀ ಸುಬ್ರಮಣ್ಯ ಷಷ್ಠಿ ಉತ್ಸವ ಗುರುವಾರ ವಿಜೃಂಭಣೆಯಿಂದ ಜರುಗಿತು.
ಭದ್ರಾವತಿ, ಡಿ. ೯: ಹಳೇನಗರದ ಶ್ರೀ ರಾಮೇಶ್ವರ-ಶ್ರೀ ಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಶ್ರೀ ಸುಬ್ರಮಣ್ಯ ಷಷ್ಠಿ ಉತ್ಸವ ಗುರುವಾರ ವಿಜೃಂಭಣೆಯಿಂದ ಜರುಗಿತು.
ಉತ್ಸವದ ಅಂಗವಾಗಿ ಬೆಳಿಗ್ಗೆ ಶ್ರೀ ಸುಬ್ರಮಣ್ಯ ಸ್ವಾಮಿಗೆ ಪಂಚಾಮೃತ ಅಭಿಷೇಕ ಮತ್ತು ಮಹನ್ಯಾಸ ಪೂರ್ವಕ ರುದ್ರಾಭಿಷೇಕ ನಂತರ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು.
ಜನ್ನಾಪುರ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಧಾನ ಅರ್ಚಕರಾದ ವೇ||ಬ್ರ|| ಕೃಷ್ಣಮೂರ್ತಿ ಸೋಮಯಾಜಿಯವರ ನೇತೃತ್ವದಲ್ಲಿ ಮೂಲಮಂತ್ರ ಹೋಮ ನೆರವೇರಿತು. ನಂತರ ರಾಜಬೀದಿ ಉತ್ಸವ, ಪೂರ್ಣಾಹುತಿ, ಬ್ರಹ್ಮಚಾರಿಗಳ ಪೂಜೆ ಮತ್ತು ತೀರ್ಥಪ್ರಸಾದ ವಿನಿಯೋಗ, ಅನ್ನಸಂತರ್ಪಣೆ ಹಾಗು ಲಲಿತಾ ಭಕ್ತ ಮಂಡಳಿಯಿಂದ ಭಜನಾ ಕಾರ್ಯಕ್ರಮಗಳು ಜರುಗಿದವು.
ಶ್ರೀ ರಾಮೇಶ್ವರ-ಶ್ರೀ ಸುಬ್ರಮಣ್ಯ ಸ್ವಾಮಿ ದೇವಸ್ಥಾನ ಅಧ್ಯಕ್ಷ ಜೆ.ಎಂ ಆನಂದರಾವ್, ಸಿ.ಕೆ ರಾಮಣ್ಣ, ಕೃಷ್ಣಮೂರ್ತಿ, ಮಧು, ನಾಗಣ್ಣ ಸೇರಿದಂತೆ ನಗರದ ವಿವಿಧೆಡೆಗಳಿಂದ ಭಕ್ತಾಧಿಗಳು ಪಾಲ್ಗೊಂಡು ಸ್ವಾಮಿಯ ಕೃಪೆಗೆ ಪಾತ್ರರಾದರು.
No comments:
Post a Comment