ಭದ್ರಾವತಿ ವಿಧಾನ ಪರಿಷತ್ ಚುನಾವಣೆ ಮತದಾನ ಶುಕ್ರವಾರ ನಡೆಯುತ್ತಿದ್ದು, ಈ ಹಿನ್ನಲೆಯಲ್ಲಿ ಗುರುವಾರ ಚುನಾವಣಾ ನೋಡಲ್ ಅಧಿಕಾರಿ, ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್ ಹಾಗು ತಹಸೀಲ್ದಾರ್ ಆರ್. ಪ್ರದೀಪ್ ಚುನಾವಣಾ ತರಬೇತಿ ಅಧಿಕಾರಿಗಳೊಂದಿಗೆ ಮತಗಟ್ಟೆ ಅಧಿಕಾರಿಗಳು ಹಾಗು ಸಿಬ್ಬಂದಿಗಳಿಗೆ ಅಗತ್ಯ ಮಾಹಿತಿಗಳನ್ನು ನೀಡಿದರು.
ಭದ್ರಾವತಿ, ಡಿ. ೯: ವಿಧಾನ ಪರಿಷತ್ ಚುನಾವಣೆ ಮತದಾನಕ್ಕೆ ತಾಲೂಕು ಆಡಳಿತ ಭರದ ಸಿದ್ದತೆ ಕೈಗೊಂಡಿದ್ದು, ಎಲ್ಲಾ ಗ್ರಾಮ ಪಂಚಾಯಿತಿ ಮತ್ತು ನಗರಸಭೆ ಸೇರಿದಂತೆ ತಾಲೂಕಿನ ಒಟ್ಟು ೩೮ ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ.
ಒಟ್ಟು ೪೭೯ ಮತದಾರರಿದ್ದು, ಈ ಪೈಕಿ ೨೫೪ ಮಹಿಳಾ ಹಾಗು ೨೨೫ ಪುರುಷ ಮತದಾರರಿದ್ದಾರೆ. ಮತದಾನದ ಹಕ್ಕಿನಲ್ಲೂ ಮಹಿಳೆಯರು ಮುಂದೆ ಇರುವುದು ವಿಶೇಷವಾಗಿದೆ. ತಾಲೂಕು ಪಂಚಾಯಿತಿ ಅವಧಿ ಮುಕ್ತಾಯಗೊಂಡಿರುವುದರಿಂದ ಇನ್ನೂ ಚುನಾವಣೆ ನಡೆದಿಲ್ಲ. ಇತ್ತೀಚೆಗೆ ನಗರಸಭೆ ೩೫ ವಾರ್ಡ್‌ಗಳಿಗೆ ಚುನಾವಣೆ ನಡೆದು ನೂತನ ಸದಸ್ಯರು ಆಯ್ಕೆಯಾಗಿದ್ದು, ಬಹುತೇಕ ಸದಸ್ಯರು ಮೊದಲ ಬಾರಿಗೆ ಮತ ಚಲಾಯಿಸುತ್ತಿದ್ದಾರೆ.
ಆಯಾ ಪಂಚಾಯಿತಿಗಳಲ್ಲಿ ಮತದಾನ ಬೆಳಿಗ್ಗೆ ೮ ಗಂಟೆ ಯಿಂದ ಸಂಜೆ ೪ ಗಂಟೆವರೆಗೆ ನಡೆಯಲಿದ್ದು, ನೋಡಲ್ ಅಧಿಕಾರಿಯಾಗಿ ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಗುರುವಾರ ಹಳೇ ತಾಲೂಕು ಕಛೇರಿ ಆವರಣದಲ್ಲಿ ಮತಗಟ್ಟೆ ಅಧಿಕಾರಿಗಳು ಹಾಗು ಸಿಬ್ಬಂದಿಗಳಿಗೆ ನೋಡಲ್ ಅಧಿಕಾರಿ ಟಿ.ವಿ ಪ್ರಕಾಶ್ ಅಗತ್ಯ ಮಾಹಿತಿಗಳನ್ನು ನೀಡಿದರು. ಉಳಿದಂತೆ ತಹಸೀಲ್ದಾರ್ ಆರ್. ಪ್ರದೀಪ್ ಚುನಾವಣಾ ತರಬೇತಿ ಅಧಿಕಾರಿಗಳೊಂದಿಗೆ ತಮ್ಮ ಕಛೇರಿಯಲ್ಲಿ ಮತಗಟ್ಟೆ ಅಧಿಕಾರಿಗಳು ಹಾಗು ಸಿಬ್ಬಂದಿಗಳಿಗೆ ಮತದಾನ ಸಂದರ್ಭದಲ್ಲಿ ವಹಿಸಬೇಕಾದ ಎಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
No comments:
Post a Comment