ಭದ್ರಾವತಿ ಎಂಪಿಎಂ ಕಾರ್ಖಾನೆ ನಿವೃತ್ತ ಕಾರ್ಮಿಕರ ಆರ್. ಜಗನ್ನಾಥ್ ಮೃತಪಟ್ಟಿದ್ದು, ಇವರ ಅಂತ್ಯಕ್ರಿಯೆ ಮೂವರು ಪುತ್ರಿಯರು ನೆರವೇರಿಸಿದರು.
ಭದ್ರಾವತಿ, ಡಿ. ೯: ಮೂವರು ಪುತ್ರಿಯರು ತಮ್ಮ ತಂದೆಯ ಅಂತ್ಯಕ್ರಿಯೆ ನೆರವೇರಿಸುವ ಮೂಲಕ ಗಮನ ಸೆಳೆದಿರುವ ಘಟನೆ ಗುರುವಾರ ನಡೆದಿದೆ.
ನಗರದ ಮೈಸೂರು ಕಾಗದ ಕಾರ್ಖಾನೆಯ ನಿವೃತ್ತ ಕಾರ್ಮಿಕ, ನಿಧಿಗೆ ನಿವಾಸಿ ಆರ್. ಜಗನ್ನಾಥ್‌ರವರು ಹಾವು ಕಡಿತದಿಂದ ಬುಧವಾರ ಮಧ್ಯಾಹ್ನ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದರು.
ಇವರ ಅಂತ್ಯಕ್ರಿಯೆ ಶಿವಮೊಗ್ಗ ರೋಟರಿ ಚಿತಾಗಾರದಲ್ಲಿ ನಡೆಯಿತು. ಅಂತ್ಯಕ್ರಿಯೆಯಲ್ಲಿ ಜಗನ್ನಾಥ್‌ರವರ ೩ ಜನ ಪುತ್ರಿಯರು ಚಿತೆಗೆ ಅಗ್ನಿ ಸ್ಪರ್ಶ ಮಾಡುವ ಮೂಲಕ ತಂದೆಗೆ ಅಂತಿಮ ಗೌರವ ಸಲ್ಲಿಸಿದರು.
ಸಂಪ್ರದಾಯದಂತೆ ಗಂಡು ಮಕ್ಕಳು ಚಿತೆಗೆ ಅಗ್ನಿ ಸ್ಪರ್ಶ ಮಾಡುವುದು ವಾಡಿಕೆ. ಆದರೆ ಪುತ್ರಿಯರು ಈ ಕಾರ್ಯವನ್ನು ನೆರವೇರಿಸಿ ಸಂಪ್ರದಾಯವಾದಿಗಳ ಸಮಾಜಕ್ಕೆ ಧಿಕ್ಕಾರ ಹಾಕುವ ಮೂಲಕ ಮಾದರಿಯಾಗಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಟೋ ಹರಿದಾಡುತ್ತಿದ್ದು, ವ್ಯಾಪಕ ಗಮನ ಸೆಳೆಯುತ್ತಿದೆ.
No comments:
Post a Comment