ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್‌ರವರ ಪರಿನಿರ್ವಾಣ ದಿನದ ಅಂಗವಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ದಲಿತ ನೌಕರರ ಒಕ್ಕೂಟದ ವತಿಯಿಂದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸೂಚಿಸಲಾಯಿತು.
ಭದ್ರಾವತಿ, ಡಿ. ೬: ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರ ೬೫ನೇ ವರ್ಷದ ಪರಿನಿರ್ವಾಣ ಅಂಗವಾಗಿ ನಗರದ ವಿವಿಧ ಸಂಘಟನೆಗಳಿಂದ ಅಂಡರ್ ಬ್ರಿಡ್ಜ್ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ದಲಿತ ನೌಕರರ ಒಕ್ಕೂಟದ ವತಿಯಿಂದ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ ನೇತೃತ್ವದಲ್ಲಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು.
ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್‌ರವರ ಪರಿನಿರ್ವಾಣ ದಿನದ ಅಂಗವಾಗಿ ಬಹುಜನ ಸಮಾಜ ಪಾರ್ಟಿ(ಬಿಎಸ್‌ಪಿ) ತಾಲೂಕು ಘಟಕದ ವತಿಯಿಂದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು.
ಜಿಲ್ಲಾ ಸಂಚಾಲಕ ಚಿನ್ನಯ್ಯ, ತಾಲೂಕು ಸಂಚಾಲಕ ಕೆ. ರಂಗನಾಥ್, ಮಹಿಳಾ ಘಟಕದ ಅಧ್ಯಕ್ಷೆ ಶಾಂತಿ, ದಲಿತ ನೌಕರರ ಒಕ್ಕೂಟದ ತಾಲೂಕು ಅಧ್ಯಕ್ಷೆ ಎಸ್. ಉಮಾ, ಅಂಗವಿಕಲರ ವಿಭಾಗದ ಜಿಲ್ಲಾಧ್ಯಕ್ಷ ಕಾಣಿಕ್‌ರಾಜ್, ವಿದ್ಯಾರ್ಥಿ ಘಟಕದ ಪ್ರಸನ್ನಕುಮಾರ್, ಪ್ರಮುಖರಾದ ಸಿ. ಜಯಪ್ಪ, ನರಸಿಂಹ, ದಾಸ್, ಮಂಜು, ಮಣಿ, ಪರಮೇಶ್ವರಪ್ಪ, ಈಶ್ವರಪ್ಪ, ಎನ್. ಗೋವಿಂದ, ಲೋಕೇಶ್, ಎ. ತಿಪ್ಪೇಸ್ವಾಮಿ, ವೆಂಕಟೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಬಹುಜನ ಸಮಾಜ ಪಾರ್ಟಿ(ಬಿಎಸ್‌ಪಿ) ತಾಲೂಕು ಘಟಕದ ವತಿಯಿಂದ ಅಧ್ಯಕ್ಷ ರಹಮತುಲ್ಲಾ ಖಾನ್ ನೇತೃತ್ವದಲ್ಲಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ಕೈಸರ್ ಷರೀಫ್ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಛಲವಾದಿ ಮಹಾಸಭಾ ವತಿಯಿಂದ ತಾಲೂಕು ಅಧ್ಯಕ್ಷ ಸುರೇಶ್ ನೇತೃತ್ವದಲ್ಲಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ಪ್ರಮುಖರಾದ ಎನ್. ಶ್ರೀನಿವಾಸ್, ಕೃಷ್ಣಛಲವಾದಿ, ಮಂಜುನಾಥ್, ಮರಿಯಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್‌ರವರ ಪರಿನಿರ್ವಾಣ ದಿನದ ಅಂಗವಾಗಿ ಛಲವಾದಿ ಮಹಾಸಭಾ ವತಿಯಿಂದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು.
No comments:
Post a Comment