ಗಿರಿಜಮ್ಮ
ಭದ್ರಾವತಿ, ಡಿ. ೩೦: ಶಿವಮೊಗ್ಗ ಶಾಂತಲಾ ಸ್ಪೆರೋಕ್ಯಾಸ್ಟ್ ಪ್ರೈವೇಟ್ ಲಿಮಿಟೆಡ್ ಆಡಳಿತ ಮಂಡಳಿ ನಿರ್ದೇಶಕ ಜಿ.ಎಸ್ ಯೋಗೇಶ್ ಕುಮಾರ್‌ರವರ ತಾಯಿ, ಜನ್ನಾಪುರ ಕಿತ್ತೂರು ರಾಣಿ ಚೆನ್ನಮ್ಮ ಬಡಾವಣೆ ನಿವಾಸಿ ಗಿರಿಜಮ್ಮ(೯೬) ನಿಧನ ಹೊಂದಿದರು.
ಇವರ ಅಂತ್ಯಕ್ರಿಯೆ ಹಳೇನಗರದ ವೀರಶೈವ ರುದ್ರಭೂಮಿಯಲ್ಲಿ ಗುರುವಾರ ಮಧ್ಯಾಹ್ನ ನೆರವೇರಿತು. ಗಿರಿಜಮ್ಮನವರ ನಿಧನಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್, ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡ, ಪರಮೇಶ್ವರ್, ಬಸವರಾಜ್, ಜೇಡಿಕಟ್ಟೆ ಶ್ರೀ ಮರುಳಸಿದ್ದೇಶ್ವರ ಜನ ಕಲ್ಯಾಣ ಟ್ರಸ್ಟ್ ಅಧ್ಯಕ್ಷ ಸಿದ್ದಲಿಂಗಯ್ಯ, ಎಸ್. ವಾಗೀಶ್, ವೀರಶೈವ ಸೇವಾ ಸಮಿತಿ ಅಧ್ಯಕ್ಷ ಮಹೇಶ್‌ಕುಮಾರ್, ಶಾಂತಲಾ ಸ್ಪೆರೋಕ್ಯಾಸ್ಟ್ ಪ್ರೈವೇಟ್ ಲಿಮಿಟೆಡ್ ಆಡಳಿತ ಮಂಡಳಿ ಹಾಗು ಇನ್ನಿತರ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ.
No comments:
Post a Comment