Sunday, February 14, 2021

ವಿವಿಧೆಡೆ ಅಂಗಡಿಮುಂಗಟ್ಟು ಮೇಲೆ ದಾಳಿ : ೧೫೨೦ ರು. ದಂಡ ವಸೂಲಾತಿ

ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಭದ್ರಾವತಿ ತಾಲೂಕಿನ ಸೀಗೆಬಾಗಿ, ಭದ್ರಾ ಕಾಲೋನಿ ಮತ್ತು ವೀರಾಪುರ ವ್ಯಾಪ್ತಿಯ ವಿವಿಧೆಡೆ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳ ಮಾರಾಟದಲ್ಲಿ ತೊಡಗಿದ್ದ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಲಾಯಿತು.
   ಭದ್ರಾವತಿ, ಫೆ. ೧೪: ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ತಾಲೂಕಿನ ಸೀಗೆಬಾಗಿ, ಭದ್ರಾ ಕಾಲೋನಿ ಮತ್ತು ವೀರಾಪುರ ವ್ಯಾಪ್ತಿಯ ವಿವಿಧೆಡೆ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳ ಮಾರಾಟದಲ್ಲಿ ತೊಡಗಿದ್ದ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ೧೫೨೦ ರು. ದಂಡ ವಸೂಲಾತಿ ಮಾಡಲಾಗಿದೆ.
   ಶಿವಮೊಗ್ಗ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಮತ್ತು ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಪ್ರಕರಣಗಳನ್ನು ದಾಖಲಿಸಿಕೊಳ್ಳುವಲ್ಲಿ ಯಶಸ್ವಿಯಾಗಿವೆ. ಅಲ್ಲದೆ ತಂಬಾಕು ಉತ್ಪನ್ನಗಳ ಕುರಿತು ಅಂಗಡಿಮುಂಗಟ್ಟುಗಳ ಮಾಲೀಕರಿಗೆ, ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು.
   ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್,   ಹಿರಿಯ ಆರೋಗ್ಯ ಸಹಾಯಕರಾದ ಆನಂದಮೂರ್ತಿ ಮತ್ತು ಹಾಲಸ್ವಾಮಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಹೇಮಂತ್, ರವಿರಾಜ್, ಕಿರಿಯ ಆರೋಗ್ಯ ಸಹಾಯಕರಾದ ಮನೋಹರ್, ಚೇತನ್ ಹಾಗೂ ಉಷಾ ಸೇರಿದಂತೆ ಇನ್ನಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.  

ದೇಶಪ್ರೇಮಿ ದಿನಾಚರಣೆ : ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ

ರಾಮ್ ಸೇನಾ ವತಿಯಿಂದ ದೇಶಪ್ರೇಮಿ ದಿನಾಚರಣೆ ಅಂಗವಾಗಿ ಭದ್ರಾವತಿ ನ್ಯೂಟೌನ್ ಮಹಾತ್ಮಗಾಂಧಿ ಉದ್ಯಾನವನದಲ್ಲಿ ಭಾನುವಾರ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು.
   ಭದ್ರಾವತಿ, ಫೆ. ೧೪: ರಾಮ್ ಸೇನಾ ವತಿಯಿಂದ ದೇಶಪ್ರೇಮಿ ದಿನಾಚರಣೆ ಅಂಗವಾಗಿ ನಗರದ ನ್ಯೂಟೌನ್ ಮಹಾತ್ಮಗಾಂಧಿ ಉದ್ಯಾನವನದಲ್ಲಿ ಭಾನುವಾರ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು.
   ಫೆ.೧೪, ೨೦೧೯ರಂದು ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಪುಷ್ಪಾರ್ಚನೆ ಸಲ್ಲಿಸಿ ಮೌನಾಚರಣೆ ನಡೆಸಲಾಯಿತು. ಅಲ್ಲದೆ ದೇಶ ರಕ್ಷಣೆಯಲ್ಲಿ ಯೋಧರ ಸೇವೆಯನ್ನು ಸ್ಮರಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಮುಖರಾದ ಉಮೇಶ್‌ಗೌಡ, ಅವಿನಾಶ್, ಮೋಹನ್, ಸಂತೋಷ್, ರಮೆಶ್, ಕೃಷ್ಣ, ಜೋಗಿ, ಪ್ರಕಾಶ್, ಕಾರ್ತಿಕ್, ರೋಹಿತ್, ಸುನಿಲ್ ಮತ್ತು ಪ್ರಭು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.


ಭದ್ರಾವತಿಯಲ್ಲಿ ತಾಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ಮೇಣದ ಬತ್ತಿ ಹಚ್ಚುವ ಮೂಲಕ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು.
   ಮಾಜಿ ಸೈನಿಕರ ಸಂಘದಿಂದ ಗೌರವ ನಮನ :
  ತಾಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ಮೇಣದ ಬತ್ತಿ ಹಚ್ಚುವ ಮೂಲಕ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು.
  ಈ ಸಂದರ್ಭದಲ್ಲಿ ಮಾತನಾಡಿದ ಪ್ರಮುಖರು, ದೇಶ ರಕ್ಷಣೆಯಲ್ಲಿ ಸೈನಿಕರ ಸೇವೆ ಅವಿಸ್ಮರಣೀಯವಾಗಿದೆ. ಸೈನಿಕರು ಎಂದಿಗೂ ಅಮರ. ವೀರ ಯೋಧರನ್ನು ಸ್ಮರಿಸಿಕೊಳ್ಳುವುದು ದೇಶದ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.
   ಕಾರ್ಯಕ್ರಮದಲ್ಲಿ ಸಂಚಾರಿ ಪೊಲೀಸ್ ಠಾಣಾಧಿಕಾರಿ ಕವಿತಾ, ಸ್ವಯಂ ಸೇವಕ ಕಿರಣ್, ಶಿಕ್ಷಕ ಎ. ತಿಪ್ಪೇಸ್ವಾಮಿ, ಎಎಪಿ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್, ಮಾಜಿ ಸೈನಿಕರ ಸಂಘ ಹಾಗು ಮಾಜಿ ಸೈನಿಕರ ಪತ್ನಿಯರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಮಾಜಿ ಸೈನಿಕರು, ವಿವಿಧ ಸಂಘಟನೆಗಳ ಪ್ರಮುಖರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.