ಎಂಎಸ್‌ಎಂಇ ಪ್ರೊಮೋಷನಲ್ ಕೌನ್ಸಿಲ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಸಿ ರಮೇಶ್ ಅಭಿನಂದನೆ
ಕಬಡ್ಡಿ ಪಂದ್ಯಾವಳಿ ವೇಳೆ ಹಲ್ಲೆಗೊಳ್ಳಲಾಗಿದ್ದ ಬಿಜೆಪಿ ಪಕ್ಷದ ಸ್ಥಳೀಯ ಮುಖಂಡರು ಹಾಗು ಕಾರ್ಯಕರ್ತರನ್ನು ಭೇಟಿ ಮಾಡಿ ಧೈರ್ಯ ತುಂಬಲು ಸೋಮವಾರ ಭದ್ರಾವತಿ ನಗರಕ್ಕೆ ಆಗಮಿಸಿದ್ದ ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರರನ್ನು ಎಂಎಸ್‌ಎಂಇ ಪ್ರೊಮೋಷನಲ್ ಕೌನ್ಸಿಲ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಸಿ ರಮೇಶ್ ಅಭಿನಂದಿಸಿದರು.
ಭದ್ರಾವತಿ, ಮಾ. ೧೬: ನಗರದಲ್ಲಿ ಕಬಡ್ಡಿ ಪಂದ್ಯಾವಳಿ ವೇಳೆ ಹಲ್ಲೆಗೊಳ್ಳಲಾಗಿದ್ದ ಬಿಜೆಪಿ ಪಕ್ಷದ ಸ್ಥಳೀಯ ಮುಖಂಡರು ಹಾಗು ಕಾರ್ಯಕರ್ತರನ್ನು ಭೇಟಿ ಮಾಡಿ ಧೈರ್ಯ ತುಂಬಲು ಸೋಮವಾರ ನಗರಕ್ಕೆ ಆಗಮಿಸಿದ್ದ ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರರನ್ನು ಎಂಎಸ್‌ಎಂಇ ಪ್ರೊಮೋಷನಲ್ ಕೌನ್ಸಿಲ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಸಿ ರಮೇಶ್ ಅಭಿನಂದಿಸಿದರು.
ರಾಜ್ಯಾದ್ಯಂತ ಸಂಚರಿಸಿ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ಹೆಚ್ಚಿನ ಶ್ರಮವಹಿಸುತ್ತಿರುವ ವಿಜಯೇಂದ್ರರನ್ನು ಉದ್ಯಮಿ, ನಗರದ ನಿವಾಸಿ ಎಚ್.ಸಿ ರಮೇಶ್ ಅಭಿನಂದಿಸುವ ಜೊತೆಗೆ ಕ್ಷೇತ್ರದಲ್ಲಿ ಪಕ್ಷದ ಮುಖಂಡರು ಹಾಗು ಕಾರ್ಯಕರ್ತರ ಮೇಲೆ ನಡೆದಿರುವ ಹಲ್ಲೆಯನ್ನು ಖಂಡಿಸಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಕೆ ಶ್ರೀನಾಥ್, ಜಿ. ಧರ್ಮಪ್ರಸಾದ್, ಮಂಡಲ ಅಧ್ಯಕ್ಷ ಎಂ ಪ್ರಭಾಕರ್, ಪ್ರಮುಖರಾದ ಮಂಗೋಟೆ ರುದ್ರೇಶ್, ಕೂಡ್ಲಿಗೆರೆ ಹಾಲೇಶ್, ವಿ. ಕದಿರೇಶ್, ಜಿ. ಆನಂದಕುಮಾರ್, ಕೆ. ಮಂಜುನಾಥ್, ಚನ್ನೇಶ್, ರಾಮನಾಥ್ ಬರ್ಗೆ, ಧನುಷ್ ಬೋಸ್ಲೆ, ನಾರಾಯಣಪ್ಪ ದೊಡ್ಮನೆ, ಎಂ.ಎಸ್ ಸುರೇಶಪ್ಪ, ಮಹಿಳಾ ಮೋರ್ಚಾ ಸೇರಿದಂತೆ ವಿವಿಧ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು ಸೇರಿದಂತೆ ಇನ್ನಿತರರು ಉಪಸಿತರಿದ್ದರು.