ಭದ್ರಾವತಿಯಲ್ಲಿ ಭಾರತೀಯ ಜನತಾ ಪಕ್ಷ ಮಹಿಳಾ ಮೋರ್ಚಾ ಕಾರ್ಯಕಾರಣಿ ಸಭೆ ಅಧ್ಯಕ್ಷೆ ಶೋಭಾಪಾಟೀಲ್ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು.
ಭದ್ರಾವತಿ, ಆ. ೮: ಭಾರತೀಯ ಜನತಾ ಪಕ್ಷ ಮಹಿಳಾ ಮೋರ್ಚಾ ಕಾರ್ಯಕಾರಣಿ ಸಭೆ ಅಧ್ಯಕ್ಷೆ ಶೋಭಾಪಾಟೀಲ್ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು.
ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್ ಇನ್ನೂ ಹೆಚ್ಚಿನ ರೀತಿಯಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು. ಮಹಿಳಾ ಮೋರ್ಚಾ ಜಿಲ್ಲಾ ಉಪಾಧ್ಯಕ್ಷೆ ಪದ್ಮಿನಿರಾವ್ ತಾಲೂಕು ಮೋರ್ಚಾ ಉಪಾಧ್ಯಕ್ಷರಾದ ಗೌರಮ್ಮ, ಅನ್ನಪೂರ್ಣ ಸಾವಂತ್, ಕಾರ್ಯಕಾರಣಿ ಸದಸ್ಯೆ ಆರ್.ಎಸ್ ಶೋಭಾ, ಪ್ರಭಾರಿ ಹೇಮಾವತಿ ವಿಶ್ವನಾಥ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಹನುಮಂತ ನಾಯ್ಕ, ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಸುಲೋಚನ ಪ್ರಕಾಶ್, ಕಾರ್ಯದರ್ಶಿ ಸುನಿತಮೋಹನ್, ನಗರಸಭಾ ಸದಸ್ಯರಾದ ಅನುಪಮ ಚೆನ್ನೇಶ್, ಅನಿತ ಮಲ್ಲೇಶ್ ಮತ್ತು ಶಶಿಕಲಾ ನಾರಾಯಣಪ್ಪ, ಗ್ರಾಮ ಪಂಚಾಯಿತಿ ಸದಸ್ಯರಾದ ಸರಸ್ವತಿ, ಸುಜಾತ, ರೇಣು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.