Monday, August 9, 2021

ಕೆಪಿಸಿಸಿ ಸಾಮಾಜಿಕ ಜಾಲತಾಣಕ್ಕೆ ನೂತನ ಪದಾಧಿಕಾರಿಗಳ ನೇಮಕ

ಶಿವಮೊಗ್ಗ ಜಿಲ್ಲಾ ಕೆಪಿಸಿಸಿ ಸಾಮಾಜಿಕ ಜಾಲತಾಣದ ಭದ್ರಾವತಿ ತಾಲೂಕು ಪದಾಧಿಕಾರಿಗಳು ನೇಮಕಗೊಂಡಿದ್ದು, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್ ಸುಂದರೇಶ್ ನೂತನ ಪದಾಧಿಕಾರಿಗಳನ್ನು ಅಭಿನಂದಿಸಿದ್ದಾರೆ.
   ಭದ್ರಾವತಿ, ಆ. ೯: ಶಿವಮೊಗ್ಗ ಜಿಲ್ಲಾ ಕೆಪಿಸಿಸಿ ಸಾಮಾಜಿಕ ಜಾಲತಾಣದ ನೂತನ ತಾಲೂಕು ಪದಾಧಿಕಾರಿಗಳು ನೇಮಕಗೊಂಡಿದ್ದು, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್ ಸುಂದರೇಶ್ ನೂತನ ಪದಾಧಿಕಾರಿಗಳನ್ನು ಅಭಿನಂದಿಸಿದ್ದಾರೆ.
   ತಾಲೂಕು ಅಧ್ಯಕ್ಷರಾಗಿ ಸದಾಶಿವಮೂರ್ತಿ, ಉಪಾಧ್ಯಕ್ಷರಾಗಿ ವಿನೋದ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ತಬ್ರೇಶ್ ಖಾನ್ ನೇಮಕಗೊಂಡಿದ್ದಾರೆ.
    ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್ ಸುಂದರೇಶ್ ನೇಮಕಾತಿ ಆದೇಶ ಪತ್ರ ನೀಡಿ ನೂತನ ಪದಾಧಿಕಾರಿಗಳನ್ನು ಅಭಿನಂದಿಸಿದರು.  ಜಿಲ್ಲಾ ಕೆಪಿಸಿಸಿ ಸಾಮಾಜಿಕ ಜಾಲತಾಣ ಅಧ್ಯಕ್ಷ ಎನ್.ಡಿ ಪ್ರವೀಣ್ ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

ವಿವಿಧ ಬೇಡಿಕೆ ಈಡೇರಿಕೆಗೆ ನಗರಸಭೆ ಪೌರಾಯುಕ್ತರಿಗೆ ಮನವಿ

ಜನತಾದಳ(ಸಂಯುಕ್ತ) ಕರ್ನಾಟಕ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್ ಗೌಡ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸೋಮವಾರ ಭದ್ರಾವತಿ ನಗರಸಭೆ ಪೌರಾಯುಕ್ತ ಕೆ. ಪರಮೇಶ್‌ರವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.  
    ಭದ್ರಾವತಿ, ಆ. ೯:  ಜನತಾದಳ(ಸಂಯುಕ್ತ) ಕರ್ನಾಟಕ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್ ಗೌಡ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸೋಮವಾರ ಪೌರಾಯುಕ್ತ ಕೆ. ಪರಮೇಶ್‌ರವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.  
     ಜಿಲ್ಲಾಧಿಕಾರಿಗಳ ವಿಶೇಷ ಅನುದಾನದಲ್ಲಿ ೧ ಕೋ. ರು. ವೆಚ್ಚದಲ್ಲಿ ನಗರಸಭೆ ವ್ಯಾಪ್ತಿಯಲ್ಲಿ ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಬಡವರಿಗೆ ನ್ಯಾಯಬೆಲೆ ಅಂಗಡಿ ಮೂಲಕ ಉಚಿತ ದಿನಸಿ ಸಾಮಗ್ರಿ ವಿತರಿಸಲಾಗುತ್ತಿದ್ದು, ಇದುವರೆಗೂ ಶೇ.೪೦ರಷ್ಟು ಮಾತ್ರ ದಿನಸಿ ಸಾಮಗ್ರಿಗಳನ್ನು ವಿತರಿಸಲಾಗಿದೆ. ಉಳಿದ ಶೇ.೬೦ರಷ್ಟು ಆಹಾರ ಸಾಮಗ್ರಿಗಳನ್ನು ತಕ್ಷಣ ವಿತರಿಸುವಂತೆ ಒತ್ತಾಯಿಸಿದ್ದಾರೆ.
    ವಾರ್ಡ್ ನಂ. ೩೨ರ ಫಿಲ್ಟರ್‌ಶೆಡ್‌ನಲ್ಲಿ ಚರಂಡಿ, ರಸ್ತೆ  ಸೇರಿದಂತೆ ಮೂಲ ಸೌಕರ್ಯಗಳ ಕೊರತೆಯಿದ್ದು ತಕ್ಷಣ ಕ್ರಮ ಕೈಗೊಳ್ಳುವಂತೆ ಹಾಗು ಇದೆ ವಾರ್ಡ್‌ನಲ್ಲಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪ್ರತಿದಿನ ನೂರಾರು ಮಂದಿ ಬರುತ್ತಿದ್ದು, ಆರೋಗ್ಯ ಕೇಂದ್ರದ ಮುಂಭಾಗ ಮಳೆ, ಬಿಸಿಲಿನಿಂದ ರಕ್ಷಣೆ ಪಡೆಯಲು ಮತ್ತು ಕುಳಿತುಕೊಳ್ಳಲು ಯಾವುದೇ ಸೌಲರ್ಭ್ಯಗಳು ಇಲ್ಲದ ಕಾರಣ ತೊಂದರೆ ಅನುಭವಿಸುವಂತಾಗಿದೆ. ಈ ಹಿನ್ನಲೆಯಲ್ಲಿ ಈ ಹಿನ್ನಲೆಯಲ್ಲಿ ಮೇಲ್ಛಾವಣಿ ವ್ಯವಸ್ಥೆ ಮತ್ತು ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ ಕಲ್ಪಿಸಿಕೊಡುವಂತೆ ಆಗ್ರಹಿಸಿದ್ದಾರೆ.

ಎಸ್.ಜಿ ನಾಗರಾಜ್ ನಿಧನ

ಎಸ್.ಜಿ ನಾಗರಾಜ್
     ಭದ್ರಾವತಿ, ಆ. ೯: ಶಿವಮೊಗ್ಗ ಜಿಲ್ಲಾ ಮಡಿವಾಳ ಸಮಾಜದ  ಉಪಾಧ್ಯಕ್ಷ, ನಗರದ ಬಿ.ಎಚ್ ರಸ್ತೆ ಹಾಲಪ್ಪ ವೃತ್ತ ಸಮೀಪದ ನಿವಾಸಿ ಎಸ್.ಜಿ ನಾಗರಾಜ್ ನಿಧನ ಹೊಂದಿದರು.
      ಪತ್ನಿ, ಓರ್ವ ಪುತ್ರಿಯನ್ನು ಹೊಂದಿದ್ದರು. ಎಸ್.ಜಿ ನಾಗರಾಜ್ ಎಸ್‌ಬಿಐ ಬ್ಯಾಂಕ್ ನೌಕರರಾಗಿದ್ದು, ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಇವರ ಅಂತ್ಯಕ್ರಿಯೆ ಹುತ್ತಾಕಾಲೋನಿ ಹಿಂದೂ ರುದ್ರ ಭೂಮಿಯಲ್ಲಿ ನೆರವೇರಿತು.
     ಎಸ್.ಜಿ ನಾಗರಾಜ್ ಮಡಿವಾಳ ಸಮಾಜ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಇವರ ನಿಧನ ಮೆಸ್ಕಾಂ ನಿವೃತ್ತ ಅಭಿಯಂತರ ಕೃಷ್ಣಮೂರ್ತಿ, ಜೆಡಿಎಸ್ ಮುಖಂಡರಾದ ಶಾರದಾ ಅಪ್ಪಾಜಿ, ನಗರ ಸಭಾ ಸದಸ್ಯರಾದ ಬಿ.ಕೆ ಮೋಹನ್, ರೇಖಾ ಪ್ರಕಾಶ್, ಅಖಿಲ ಭಾರತ ವೀರಶೈವ ಸಮಾಜದ ತಾಲೂಕು ಅಧ್ಯಕ್ಷ ಸಿದ್ದಲಿಂಗಯ್ಯ ಮುಖಂಡರಾದ ಸಿದ್ದಲಿಂಗಯ್ಯ, ಮಡಿವಾಳ ಸಮಾಜದ ತಾಲೂಕು ಅಧ್ಯಕ್ಷ ಪುರುಷೋತ್ತಮ್, ವೆಂಕಟೇಶ್, ಜಿಲ್ಲಾಧ್ಯಕ್ಷ ಎಂ.ಎಸ್ ಸುರೇಶ್,  ದಯಾನಂದ್, ನೆಲಗದ್ದೆ ಮಂಜಣ್ಣ, ದಿನೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.