Wednesday, August 25, 2021
೩ ದಿನಗಳ ಕಾಲ ಅದ್ದೂರಿಯಾಗಿ ಜರುಗಿದ ಶ್ರೀ ರಾಘವೇಂದ್ರ ಸ್ವಾಮಿಗಳ ೩೫೦ನೇ ಆರಾಧನಾ ಮಹೋತ್ಸವ
ಭದ್ರಾವತಿ ಹಳೇನಗರ ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ ೩೫೦ ಆರಾಧನಾ ಮಹೋತ್ಸವದ ೩ ದಿನಗಳ ಕಾಲ ಅದ್ದೂರಿಯಾಗಿ ನಡೆಯಿತು.
ಭದ್ರಾವತಿ, ಆ. ೨೫ : ಹಳೇನಗರ ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ ೩೫೦ ಆರಾಧನಾ ಮಹೋತ್ಸವದ ೩ ದಿನಗಳ ಕಾಲ ಅದ್ದೂರಿಯಾಗಿ ನಡೆಯಿತು.
ಬುಧವಾರ ಬೆಳಗ್ಗೆ ರಾಯರ ಬೃಂದಾವನಕ್ಕೆ ಹಾಲಿನ ಅಭಿಷೇಕ, ಹೂವಿನ ಅಲಂಕಾರ ಮತ್ತು ಪ್ರಾಕಾರದಲ್ಲಿ ರಾಜಬೀದಿ ಉತ್ಸವ ನಡೆಯಿತು. ಮಧ್ಯಾಹ್ನ ೧೨ ಗಂಟೆಗೆ ತೀರ್ಥಪ್ರಸಾದ ವಿನಿಯೋಗ, ಮಹಾಮಂಗಳಾರತಿ, ಅನ್ನಸಂತರ್ಪಣೆ ಕಾರ್ಯಕ್ರಮಗಳು ಜರುಗಿದವು.
ಸಂಜೆ ಹರಿಪ್ರಿಯ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ಮತ್ತು ಶ್ರೀಕೃಷ್ಣ ಚಂಡೆ ಬಳಗದಿಂದ ಉತ್ಸವ ಹಾಗೂ ಕರಾವಳಿ ವಿಪ್ರ ಬಳಗದಿಂದ ನೃತ್ಯ ಕಾರ್ಯಕ್ರಮ ನಡೆಯಿತು.
ಗುರುರಾಜ ಸೇವಾ ಸಮಿತಿ ಅಧ್ಯಕ್ಷ ಮುರಳೀಧರ ತಂತ್ರಿ, ಉಪಾಧ್ಯಕ್ಷೆ ಸುಮಾ ರಾಘವೇಂದ್ರ, ಪ್ರಧಾನ ಕಾರ್ಯದರ್ಶಿ ರಮಾಕಾಂತ್, ನಿರಂಜನ ಆಚಾರ್, ಪವನ್‌ಕುಮಾರ್ ಉಡುಪ, ಪ್ರಮೋದ್ ಹಾಗೂ ಪ್ರಧಾನ ಅರ್ಚಕ ಸತ್ಯನಾರಾಯಣ, ಗೋಪಾಲಚಾರಿ, ಶ್ರೀನಿವಾಸ, ಸಹಾಯಕ ಅರ್ಚಕ ಮಾಧುರಾವ್, ಶ್ರೀಪತಿ, ಮಧು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Subscribe to:
Posts (Atom)