Sunday, September 19, 2021

ಸ್ಕೌಟ್ಸ್ ಮತ್ತು ಗೈಡ್ಸ್ ಒಂದು ದಿನದ ಕಾರ್ಯಾಗಾರ

 


  ಭದ್ರಾವತಿ : ನಗರದ ನ್ಯೂಟೌನ್  ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜ್ ನಲ್ಲಿ ರೋವರ್ಸ್ ಮತ್ತು  ರೇಂಜರ್ಸ್ ವಿದ್ಯಾರ್ಥಿಗಳಿಗೆ ಸ್ಕೌಟ್ಸ್ ಮತ್ತು ಗೈಡ್ಸ್ ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಸಂಪನ್ಮೂಲ ವ್ಯಕ್ತಿ ಭಾರತಿ ಡಾಯಸ್ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಉಪನ್ಯಾಸ ನೀಡಿದರು. ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಜೆ. ಉಮಾಶಂಕರ್ ಅಧ್ಯಕ್ಷತೆ ವಹಿಸಿದ್ದರು. ಪ್ರೊ. ವರದರಾಜ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.  ಡಾ. ದ್ರಾಕ್ಷಾಹಿಣಿ  ಎಂ ಡೊಂಗ್ರೆ ನಿರೂಪಿಸಿದರು. ಡಾ. ಷಣ್ಮುಖಪ್ಪ ವಂದಿಸಿದರು. ಸುಮಾರು 35 ಕ್ಕೂ ಹೆಚ್ಚು  ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಹಿರಿಯ ಪತ್ರಕರ್ತ ಕೆ. ನಾರಾಯಣ ನಿಧನ

ಕೆ. ನಾರಾಯಣ
    ಭದ್ರಾವತಿ, ಸೆ. ೧೯: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರು, ಹಿರಿಯ ಪತ್ರಕರ್ತರಾದ ಕೆ. ನಾರಾಯಣ(೭೮) ಭಾನುವಾರ ನಿಧನ ಹೊಂದಿದರು.
    ಪತ್ನಿ, ಇಬ್ಬರು ಪುತ್ರರನ್ನು ಹೊಂದಿದ್ದರು. ಕೆ. ನಾರಾಯಣ ಅವರು ಭುವನವಾರ್ತೆ ಪತ್ರಿಕೆ ಸಂಸ್ಥಾಪಕರ ಸಂಪಾದಕರಾಗಿದ್ದು, ನಂತರ ವಿವಿಧ ದಿನ ಪತ್ರಿಕೆಗಳಲ್ಲಿ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಹಿರಿಯ ಸದಸ್ಯರಾಗಿ ಮಾರ್ಗದರ್ಶಕರಾಗಿದ್ದರು. ಇವರ ನಿಧನಕ್ಕೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಮೌನಾಚರಣೆ ನಡೆಸಿ ಸಂತಾಪ ಸೂಚಿಸಿತು.