ಜೆ.ಎಚ್ ಪಟೇಲ್
ಭದ್ರಾವತಿ, ಅ. ೯: ಜೆ.ಎಚ್ ಪಟೇಲ್ ಅಭಿಮಾನಿ ಬಳಗದ ವತಿಯಿಂದ ಧೀಮಂತ ನಾಯಕ ಮಾಜಿ ಮುಖ್ಯಮಂತ್ರಿ ಜೆ.ಎಚ್ ಪಟೇಲ್ ಅವರ ೯೧ನೇ ಜನ್ಮ ದಿನಾಚರಣೆ ಅಂಗವಾಗಿ ವಿಚಾರ ಸಂಕಿರ್ಣ ಸಾವಯವ-ರಾಜಕಾರಣ ಅ.೧೦ರಂದು ಬೆಳಿಗ್ಗೆ ೧೧ ಗಂಟೆಗೆ ಕಾಂಚನ ಹೋಟೆಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದು, ಮಾಜಿ ಶಾಸಕ, ಜೆಡಿಯು ರಾಜ್ಯಾಧ್ಯಕ್ಷ ಮಹಿಮಾ ಜೆ ಪಟೇಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಶಾಸಕ ಬೇಳೂರ ಗೋಪಾಲ ಕೃಷ್ಣ ಪಟೇಲ್ ಅವರ ಭಾವಚಿತ್ರ ಅನಾವರಣಗೊಳಿಸಲಿದ್ದು, ಶಿಕ್ಷಣ ಪ್ರಸಾರಕ ಸಮಿತಿ ಉಪಾಧ್ಯಕ್ಷ ಶಶಿಭೂಷಣ ಹೆಗ್ಗಡೆ ಪಟೇಲ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಿದ್ದಾರೆ. ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ಉಪನ್ಯಾಸ ನೀಡಲಿದ್ದಾರೆ.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಬಲ್ಕೀಶ್ ಬಾನು, ಒಳಚರಂಡಿ ಮತ್ತು ನಗರ ನೀರು ಸರಬರಾಜು ಮಂಡಳಿ ನಿರ್ದೇಶಕ ಮಂಗೋಟೆ ರುದ್ರೇಶ್, ಶಿವಮೊಗ್ಗ ಮಹಾನಗರ ಪಾಲಿಕೆ ಸದಸ್ಯ ಧೀರರಾಜ್ ಹೊನ್ನವಿಲೆ, ನ್ಯಾಯವಾದಿಗಳಾದ ಟಿ. ಚಂದ್ರೇಗೌಡ, ಎಂ. ಶಿವಕುಮಾರ್, ನಗರಸಭೆ ಮಾಜಿ ಅಧ್ಯಕ್ಷ ಆರ್. ಕರುಣಾಮೂರ್ತಿ, ಉಪವಲಯ ಅರಣ್ಯಾಧಿಕಾರಿ ಬಿ.ಆರ್ ದಿನೇಶ್‌ಕುಮಾರ್, ವಿದ್ಯಾಥಿ ಸಂಘಟನೆ ರಾಜ್ಯಾಧ್ಯಕ್ಷ ವಿನಯ್ ರಾಜಾವತ್, ಶಶಿಕುಮಾರ್ ಎಸ್. ಗೌಡ, ಬಾಬು ದೀಪಕ್‌ಕುಮಾರ್, ಶಿವಬಸಪ್ಪ, ಬಿ. ಗಂಗಾಧರ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.